Breaking News

ನಾನು ಸುಳ್ಳು ಹೇಳಿದ್ದರೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ: ಸಿಎಂ

Spread the love

ಬೆಂಗಳೂರು: ನಾನು ಸುಳ್ಳು ಹೇಳುತ್ತಿದ್ದೇನೆ ಎಂದಾದರೇ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಕರ್ನಾಟಕ ತೆರಿಗೆ ಕಟ್ಟುವುದರಲ್ಲಿ 2ನೇ ಸ್ಥಾನದಲ್ಲಿದೆ. ನಮಗೆ ಸರಿಯಾಗಿ ಅನುದಾನ ಹಂಚಿಕೆಯಾಗಿಲ್ಲ. ಈ ವಿಷಯವನ್ನು ನಾವು ಕೇಳದೇ ಸುಮ್ಮನಿರಬೇಕಾ? ಎಂದು ತೆರಿಗೆ ವಿಷಯದಲ್ಲಿ ಅನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಕಿಡಿ ಕಾರಿದರು.

 

ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿಂದು ಟೀಕೆ ವ್ಯಕ್ತಪಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಯಡಿಯೂರಪ್ಪನವರ ತರಾ ತಲೆ ಅಲ್ಲಾಡಿಸಿಕೊಂಡು, ಬಾಯಿ ಮುಚ್ಚಿಕೊಂಡು ಇರಬೇಕಾ? ಅವರು ಅನ್ಯಾಯವಾದರೂ ತೆಪ್ಪಗೆ ಇರುತ್ತಾರೆ. ಆದರೆ ನಾವು ಪ್ರತಿಭಟನೆ ಮಾಡಬಾರದಾ? ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಈ ಬಾರಿ 4 ಲಕ್ಷದ 30 ಸಾವಿರ ಕೋಟಿ ತೆರಿಗೆ ಸಂಗ್ರಹವಾಗುತ್ತಿದೆ. ನಮಗೆ ಕೇಂದ್ರದಿಂದ 50, 257 ಕೋಟಿ ರೂಪಾಯಿ ಅನುದಾನ ಮಾತ್ರ ಬರುತ್ತದೆ. ಉಳಿದಿದ್ದನ್ನು ಅವರೇ ಇಟ್ಟುಕೊಳ್ಳುತ್ತಾರೆ ಎಂದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ