Breaking News

ಸಂಸತ್​ನಲ್ಲಿ ನಿರ್ಮಲಾ ಸೀತಾರಾಮನ್ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ: ಪರಮೇಶ್ವರ್

Spread the love

ಬೆಂಗಳೂರು,  ಅನುದಾನದಲ್ಲಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ವಿಚಾರವಾಗಿಬಿಜೆಪಿ-ಕಾಂಗ್ರೆಸ್ನಡುವೆ ಆರೋಪ-ಪ್ರತ್ಯಾರೋಪಗಳ ನಡುವೆ ಸಂಸತ್​ ಅಧಿವೇಶನದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಅಂಕಿ-ಅಂಶಗಳ ಮೂಲಕ ಕಾಂಗ್ರೆಸ್ ಆರೋಪಿಗಳಿಗೆ ತಿರುಗೇಟು ನೀಡಿದ್ದರು. ಈ ವಿಚಾರವಾಗಿ ಮಾತನಾಡಿದ ರಾಜ್ಯ ಗೃಹಮಂತ್ರಿ ಡಾ.ಜಿ.ಪರಮೇಶ್ವರ್ (Dr.G.Parameshwar), ನಿರ್ಮಲಾ ಸೀತಾರಾಮನ್ ಅವರು ಸಂಸತ್​ನಲ್ಲಿ ಅತಿ ದೊಡ್ಡ ಸುಳ್ಳು ಹೇಳಿದ್ದಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಕೇಂದ್ರದಿಂದ ಒಂದೇ ಒಂದು ರೂಪಾಯಿ ನಮಗೆ ಬಂದಿಲ್ಲ. ಅತಿ ದೊಡ್ಡ ಸುಳ್ಳನ್ನ ಸಂಸತ್‌ನಲ್ಲಿ ನಿರ್ಮಾಲಾ ಸೀತರಾಮನ್ ಹೇಳಿದ್ದಾರೆ. ಕರ್ನಾಟಕದಿಂದ ಆಯ್ಕೆ ಆಗಿರುವ ಸಚಿವೆ ಸುಳ್ಳು ಹೇಳಿದ್ದು ಬೇಸರ ತರಿಸಿದೆ. ಬರ ಸಂಬಂಧ ರಾಜ್ಯದಲ್ಲಿ ಸರ್ವೆ ಕೆಲಸ ಮಾಡಿಕೊಂಡು ಹೋಗಿದ್ದರು. ಆದರೆ ಹಣ ಬಿಡುಗಡೆ ಮಾಡಿಲ್ಲ. ನಮಗೆ ಕೊಡಬೇಕಾದ ಎನ್‌ಡಿಆರ್‌ಎಫ್ ಹಣ ಕೊಡಿ ಎಂದರು.

ವೈಯಕ್ತಿಯ ವಿಚಾರವಾಗಿ ಪ್ರತಾಪ್ ರೆಡ್ಡಿ ರಾಜೀನಾಮೆ

ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ನಿವೃತ್ತಿಗೆ ಎರಡು ತಿಂಗಳು ಬಾಕಿ ಇರುವಾಗಲೇ ರಾಜೀನಾಮೆ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಗೃಹ ಸಚಿವರು, ವೈಯಕ್ತಿಕ ಕಾರಣದಿಂದ ಪ್ರತಾಪ್ ರೆಡ್ಡಿ ರಾಜೀನಾಮೆ ಕೊಟ್ಟಿದ್ದಾರೆ. ಯಾವುದೇ ಕಾರಣ ಕೊಟ್ಟು ರಾಜೀನಾಮೆ ಕೊಟ್ಟಿಲ್ಲ. ಅದಕ್ಕೆ ಅಂಗೀಕಾರ ಮಾಡಬೇಕಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.


Spread the love

About Laxminews 24x7

Check Also

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು.

Spread the love ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಇಂದು ಸಂಕೇಶ್ವರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಲಾಯಿತು. ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ