Breaking News

ಬಿವೈ ವಿಜಯೇಂದ್ರ ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಶಾಸಕ ಯತ್ನಾಳ್

Spread the love

ಹಾವೇರಿ, ಫೆಬ್ರವರಿ 11: ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಜೊತೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗ್ರಾಮದ ಕೋಡಿಯಾಲ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಮತ್ತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಅಟ್ಯಾಕ್ ಮಾಡಿದ್ದಾರೆ. ಬಿವೈ.ವಿಜಯೇಂದ್ರನಿಂದ ನನಗೇನೂ ಆಗಬೇಕಾಗಿಲ್ಲ.
ಅವರೊಂದಿಗೆ ನನ್ನದು ಯಾವುದೇ ವ್ಯವಹಾರವಿಲ್ಲ​. ಅಪ್ಪ-ಮಕ್ಕಳ ಜೊತೆಗೆ ನಾನು ರಾಜಿಯಾಗಬೇಕಾ ಎಂದು ವಾಗ್ದಾಳಿ ಮಾಡಿದ್ದಾರೆ.ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗ್ರಾಮದ ಕೋಡಿಯಾಲ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪ್ಪ-ಮಕ್ಕಳ ಜೊತೆಗೆ ನಾನು ರಾಜಿಯಾಗಬೇಕಾ? ನನಗೆ ರಾಜಿ ಅವಶ್ಯಕತೆ ಇಲ್ಲ. ಬಿ.ವೈ.ವಿಜಯೇಂದ್ರನಿಂದ ನನಗೇನೂ ಆಗಬೇಕಾಗಿಲ್ಲ. ವಿಜಯೇಂದ್ರ ಜತೆ ನನ್ನದು ಯಾವುದೇ ವ್ಯವಹಾರವಿಲ್ಲ. ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗಬೇಕಷ್ಟೇ. ವಿಜಯೇಂದ್ರ ಅವರ ಉದ್ದೇಶ ಏನು. ವಿ.ಸೋಮಣ್ಣ ಅವರ ಮೇಲೆ ಏನು ಮಾಡಿದ್ದಾರೆ? ವಿಜಯಪುರದಲ್ಲಿ ಏನ್ ಮಾಡಿದ್ದಾರೆ ಎಲ್ಲಾ ಗೊತ್ತು. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೋಲಿಸುವುದಕ್ಕೆ ಏನು ಮಾಡಿದ್ದಾರೆ. ಇವರ ಎಲ್ಲಾ ಇತಿಹಾಸ ಗೊತ್ತಿದೆ. ಲೋಕಸಭೆ ಚುನಾವಣೆ ಬಳಿಕ ಹೇಳುತ್ತೇನೆ ಎಂದು ಮತ್ತೆ ವಿಜಯೇಂದ್ರ ವಿರುದ್ಧ ಅಟ್ಯಾಕ್ ಮಾಡಿದ್ದಾರೆ.​​

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ