ಹೇಳಿಕೆ ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು: ಜಗದೀಶ್‌ ಶೆಟ್ಟರ್

Spread the love

ಹುಬ್ಬಳ್ಳಿ: ‘ಹೇಳಿಕೆ ನೀಡುವಾಗ ಯಾವ ಪಕ್ಷದ ನಾಯಕರೇ ಇರಲಿ ಲಕ್ಷ್ಮಣ ರೇಖೆ ದಾಟಬಾರದು’ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ದೇಶದ ವಿಭಜನೆ ಮಾಡುವವರನ್ನು ಗುಂಡಿಟ್ಟು ಕೊಲ್ಲುವ ಕಾಯ್ದೆ ತರಬೇಕು ಎಂದು ನೀಡಿರುವ ಹೇಳಿಕೆ ತಪ್ಪು ಎಂದರು.

ಯಾರೇ ಆಗಲಿ ಹೇಳಿಕೆ ನೀಡುವಾಗ ಲಕ್ಷ್ಮಣ ರೇಖೆ ದಾಟಬಾರದು. ಗಾಂಧಿ ಅವರ ಹೆಸರನ್ನು ಹೇಳಿಯೇ ಕಾಂಗ್ರೆಸ್ ಇಷ್ಟು ವರ್ಷ ಆಡಳಿತ ಮಾಡಿಕೊಂಡು ಬಂದಿದ್ದಾರೆ. ಮತ್ತೆ ಮೂರ್ಖರನ್ನಾಗಿ ಮಾಡುವುದು ಸಾಧ್ಯವಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಮಂಡ್ಯ ಟಿಕೆಟ್‌ ವಿಚಾರವಾಗಿ ನನಗೆ ಏನು ಗೊತ್ತಿಲ್ಲ. ಮಂಡ್ಯದಿಂದ ಸ್ಪರ್ಧಿಸುವ ವಿಚಾರ ಅವರಿಗೆ ಬಿಟ್ಟಿದೆ. ನಾನು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ವರಿಷ್ಠರು ಚರ್ಚೆ ಮಾಡಿಲ್ಲ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೂಚಿಸಿದರೆ ಅದನ್ನು ನಾನು ಸ್ವೀಕರಿಸುತ್ತೇನೆ. ಆ ವಿಷಯದ ಬಗ್ಗೆಯೂ ನಾನು ಯೋಚಿಸಲ್ಲ. ಈ ಬಗ್ಗೆ ಪಕ್ಷದ ಕೇಂದ್ರ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ