Breaking News

ಶ್ರೀರಾಮನಿಗೆ ಅವಹೇಳನ ಮಾಡಿದ ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

Spread the love

ಮಂಗಳೂರು, ಫೆ.12:ಶ್ರೀರಾಮನಿಗೆ (Sri Ram) ಅವಹೇಳನಮಾಡಿದ ಆರೋಪ ಸಂಬಂಧ ಸಂತ ಜೆರೋಸಾ ಶಾಲೆಯ (St Gerosa School) ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ದೇವರಿಗೆ ಅವಹೇಳನ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ (Vedavyas Kamath) ನೇತೃತ್ವದಲ್ಲಿ ಇಂದು ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಸ್ಥಳಕ್ಕೆ ಆಗಮಿಸಿದ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿಯನ್ನು ಅಮಾನತು ಮಾಡಿದ್ದಾಗಿ ತಿಳಿಸಿದ್ದಾರೆ.

ನಗರದ ಜೆಪ್ಪುನಲ್ಲಿರುವ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆಯ ಕಿಚ್ಚು ಜೋರಾಗಿದ್ದು, ಶಾಲೆಯ ಮುಂಭಾಗ ನೂರಾರು ಸಂಖ್ಯೆಯಲ್ಲಿ ಆಕ್ರೋಶಿತರು ಜಮಾವಣೆಗೊಂಡಿದ್ದಾರೆ. ಹಿಂದೂ ವಿದ್ಯಾರ್ಥಿಗಳ ಪೋಷಕರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಕೂಡ ಆಗಮಿಸಿದ್ದು, ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಲಾಗಿದೆ. ಈ ವೇಳೆ ಶಾಲೆ ಗೇಟ್ ಮುಂಭಾಗ ಶಾಸಕ ಹಾಗೂ ಪೋಷಕರನ್ನು ಪೊಲೀಸರು ತಡೆದರು.

 

ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾ ನಿರತ ಪೋಷಕರ ಮುಂದೆ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿದ್ದಾಗಿ ತಿಳಿಸಿದರು.

ಅಧಿಕೃತವಾಗಿ ಲಿಖಿತವಾಗಿ ಶಾಲೆಯ ಲೆಟರ್ ಹೆಡ್​ನಲ್ಲಿ ಅಮಾನತ್ತಿನ ಬಗ್ಗೆ ಸ್ಪಷ್ಟನೆ ನೀಡಲಾಗಿದ್ದು, ಮುಂದೆ ಶಿಕ್ಷಣ ಇಲಾಖೆ ಪ್ರಕರಣದ ಆಂತರಿಕ ತನಿಖೆ ನಡೆಸಲಿದೆ. ಶಿಕ್ಷಣ ಇಲಾಖೆ ತನಿಖಾ ವರದಿ ಆಧಾರದ ಮೇಲೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

ಅಮಾನತು ಮಾಡಿದರೂ ತಪ್ಪು ಒಪ್ಪಿಕೊಳ್ಳದ ಶಾಲಾಡಳಿತ.

ಶಿಕ್ಷಕಿಯಿಂದ ಶ್ರೀರಾಮನ ಅವಹೇಳನ ಆರೋಪ ಸಂಬಂಧ ಲಿಖಿತ ರೂಪದಲ್ಲಿ ಅಮಾನತು ಆದೇಶ ಹೊರಡಿಸಲಾಗಿದೆಯಾದರೂ ಆಡಳಿತ ಮಂಡಳಿ ತಪ್ಪು ಒಪ್ಪಿಕೊಂಡಿಲ್ಲ. ಮುಖ್ಯ ಶಿಕ್ಷಕಿ ಅಮಾನತು ಆದೇಶ ಓದುವ ವೇಳೆ ಹಿಂದೂ ಕಾರ್ಯಕರ್ತರು ಹಾಗೂ ಪೋಷಕರು ಮತ್ತೆ ರೊಚ್ಚಿಗೆದಿದ್ದಾರೆ. ಮುಖ್ಯಶಿಕ್ಷಕಿ‌ ಮತ್ತು ಶಾಲಾ ಆಡಳಿತಕ್ಕೆ ಶಾಸಕರು ಹಿಗ್ಗಾಮುಗ್ಗಾವಾಗಿ ತರಾಟೆಗೆ ತೆಗೆದುಕೊಂಡರು. ನೀವು ನಿಮ್ಮ ತಪ್ಪು ಒಪ್ಪಿಕೊಳ್ಳದೇ ಇದ್ದರೆ ನಾವು ಬಿಡಲ್ಲ. ನಿಮ್ಮ ದಾರಿಗೆ ನಿಮಗೆ, ನಮ್ಮ ದಾರಿ ನಮಗೆ ಅಂತ ಕಾಮತ್ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ಸರ್ಕಾರಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ: ಯತ್ನಾಳ

Spread the love ದಾವಣಗೆರೆ: ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ