2024: ಗೃಹಲಕ್ಷ್ಮಿಗೆ 17500 ಕೋಟಿ ರೂ. ನಿಗದಿ; ಮಹಿಳೆಯರ ಆರ್ಥಿಕ ಸ್ಥಿತಿ ಉತ್ತಮ: ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಂಗಳೂರು: ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು (Karnataka Budget Session 2024) ಉದ್ದೇಶಿಸಿ ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತವಾಗಿದೆ. ಸರ್ಕಾರದ ಸಾಧನೆಗಳ ಪ್ರತಿಬಿಂಬವಾಗಿದೆ. ನನ್ನ ಇಲಾಖೆಗೆ ಸಂಬಂಧಿಸಿದಂತೆ ಐದು ಗ್ಯಾರಂಟಿ ಯೋಜನೆಗಳಲ್ಲಿ (Congress Guarantee Scheme) ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ (Gruha lakshmi scheme) ಇದುವರೆಗೂ 17500 ಕೋಟಿ ರೂಪಾಯಿ ಅನುದಾನವನ್ನು ನಿಗದಿಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಹೇಳಿದ್ದಾರೆ.

 

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಭಾಷಣದ ಪ್ರಮುಖ ಹೈಲೈಟ್ಸ್ ಆಗಿತ್ತು. ಸರ್ಕಾರದ ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಮತ್ತು ಯುವ ನಿಧಿ ಎಂಬ ಗ್ಯಾರಂಟಿ ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಹಾಗೂ ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಸವಳಿದ ಜನರಿಗೆ ಪಂಚ ಗ್ಯಾರಂಟಿ ಯೋಜನೆಗಳು ನೆಮ್ಮದಿ ನೀಡಿವೆ. ಈ ಯೋಜನೆಗಳಿಗಾಗಿ ಬೃಹತ್ ಸಂಖ್ಯೆಯಲ್ಲಿ ಬಂದ ಅರ್ಜಿಗಳೇ ಸಾಕ್ಷಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ