Breaking News

ಲೋಕಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಖರ್ಗೆಗೆ ಶಾಮನೂರು ಶಿವಶಂಕರಪ್ಪ ಪತ್ರ

Spread the love

ಬೆಂಗಳೂರು, ಫೆ.12: ರಾಜ್ಯಸಭೆ (Rajya Sabha) ಮತ್ತು ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದು, ಟಿಕೆಟ್​ಗಾಗಿ ಕಾಂಗ್ರೆಸ್​ನಲ್ಲಿ ಲಾಭಿಗಳು ಆರಂಭಗೊಂಡಿವೆ. ಈ ನಡುವೆ, ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಕೋರಿ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರಿಗೆ ಪತ್ರ ಬರೆದಿದ್ದಾರೆ.

 

ಲೋಕಸಭೆ ಚುನಾವಣೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಖರ್ಗೆಗೆ ಶಾಮನೂರು ಶಿವಶಂಕರಪ್ಪ ಪತ್ರ

ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ.

Spread the love ಗೋಕಾಕ: ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ 15ಜನರು ಸೇರಿಕೊಂಡು ಬಸಪ್ಪ ಎಂಬ ಕುಟುಂಬದ ಮೇಲೆ ಹಲ್ಲೆ. ಮನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ