ಕುಮಾರಸ್ವಾಮಿ ಮತ್ತು ಪ್ರೀತಂ ನಡುವೆ ಮತ್ತೆ ವಾಕ್ ಸಮರ ಶುರು

Spread the love

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಸಂಭಾವ್ಯ ಅಭ್ಯರ್ಥಿಗಳ ವಿಚಾರದಲ್ಲಿ ಪ್ರೀತಂ ಜೆ ಗೌಡ ಮತ್ತು ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವ್ಯತಿರಿಕ್ತ ಹೇಳಿಕೆಗಳ ನಂತರ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪ್ರೀತಂ ನಡುವೆ ಮತ್ತೆ ವಾಕ್ ಸಮರ ಶುರುವಾಗಿದೆ
ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಸಂಭಾವ್ಯ ಅಭ್ಯರ್ಥಿಗಳ ವಿಚಾರದಲ್ಲಿ ಪ್ರೀತಂ ಜೆ ಗೌಡ ಮತ್ತು ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ವ್ಯತಿರಿಕ್ತ ಹೇಳಿಕೆಗಳ ನಂತರ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪ್ರೀತಂ ನಡುವೆ ಮತ್ತೆ ವಾಕ್ ಸಮರ ಶುರುವಾಗಿದೆ.
ಸೀಟು ಹಂಚಿಕೆ ಕುರಿತು ಜಿಡಿಎಸ್ ಮುಖಂಡರು ಮಾತನಾಡಿರುವ ಬೆನ್ನಲ್ಲೇ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಜೆ ಗೌಡ ಹಾಗೂ ಜೆಡಿಎಸ್ ನಾಯಕರ ನಡುವೆ ವಾಗ್ಯುದ್ದ ಹೆಚ್ಚಾಗಿದೆ. ಹಾಸನ ಮತ್ತು ಮಂಡ್ಯ ಅಭ್ಯರ್ಥಿಗಳ ವಿಚಾರವಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಪ್ರಬಲ ತಿರುಗೇಟು ನೀಡಿದ್ದಾರೆ. ಸೋಮವಾರ ನಡೆದ ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಹೆಚ್.ಡಿ.ಕುಮಾರಸ್ವಾಮಿ, ಪ್ರೀತಂ ತಮ್ಮ ಇದ್ದಂತೆ. ಭಿನ್ನಾಭಿಪ್ರಾಯಗಳಿದ್ದರೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳುವುದಾಗಿ ತಿಳಿಸಿದರು.

ಪ್ರೀತಂ ಅವರಿಗೆ ಆಸಕ್ತಿ ಇದ್ದರೆ ಹಾಸನ ಕ್ಷೇತ್ರದಿಂದ ಕಣಕ್ಕಿಳಿಸಬಹುದು. ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಬೇಕು ಎಂದು ಹೇಳಿದರು.


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ