Breaking News

ಹಣಕಾಸು ಆಯೋಗದ ಮುಂದೆ ಸಿದ್ದರಾಮಯ್ಯನವರು ಸಮಸ್ಯೆ ಹೇಳಲಿ: ಪ್ರಹ್ಲಾದ್‌ ಜೋಶಿ

Spread the love

ಕೋಲಾರ: ತಿನ್ನಲು ನಾನು, ಯುದ್ಧಕ್ಕೆ ನೀವು ಹೋಗಿ ಅಂತಾ ಸಿದ್ದರಾಮಯ್ಯ (Siddaramaiah) ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ವಂಚನೆ ಮಾಡಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿದರು.

ಸಿದ್ದರಾಮಯ್ಯನವರು ಹಣಕಾಸು ಆಯೋಗದ ಮುಂದೆ ಅವರ ಸಮಸ್ಯೆ ಹೇಳಲಿ ಎಂದು ಸವಾಲು ಹಾಕಿದರು.

ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಕೊಟ್ಟಿದ್ದಾರೆ. ರಾಜ್ಯಕ್ಕೆ 1 ಲಕ್ಷ 50 ಸಾವಿರ ಕೋಟಿ ಆದರೂ ಯುಪಿಎ ಸರ್ಕಾರ ಕೊಡಬೇಕಿತ್ತು. ಯಾಕೆ ಕೊಟ್ಟಿಲ್ಲ? ನಮ್ಮ ಅವಧಿಯಲ್ಲಿ 2.61 ಲಕ್ಷ ಕೋಟಿ ರಾಜ್ಯಕ್ಕೆ ಕೊಟ್ಟಿದ್ದೇವೆ. ಆ ಮೂಲಕ ನಮ್ಮ ಸರ್ಕಾರ ಕಾಂಗ್ರೆಸ್ ನೀಡಿದ್ದಕ್ಕಿಂತ 256 ಪರ್ಸೆಂಟ್​ ಹೆಚ್ಚು ಅನುದಾನ ಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಕಾಲದಲ್ಲಿ ಬಜೆಟ್​​ ಗಾತ್ರವೂ ಹೆಚ್ಚಿದೆ ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಟಿಕೆಟ್ ಹಂಚಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಗೆ ಕ್ಷೇತ್ರ ಹಂಚಿಕೆ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಸಮಿತಿ ಮುಂದೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ ಎಂದರು.

ಕೋಲಾರ ಬಿಜೆಪಿಯ ಬಲವಾದ ಕ್ಷೇತ್ರ. ಜೆಡಿಎಸ್​ಗೆ ಕೋಲಾರ ಬಿಟ್ಟು ಕೊಡುವ ಬಗ್ಗೆ ತೀರ್ಮಾನ ಆಗಿಲ್ಲ. ಹೆಚ್​ಡಿ ದೇವೇಗೌಡರ ಜೊತೆ ಮಾತನಾಡಿ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

Spread the love ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ