Breaking News

ಶಿಕ್ಷಕರ ಎಲ್ಲ ಸಮಸ್ಯೆಗಳಿಗೆ ಪರಿಹಾರ: ಹಣಮಂತ ನಿರಾಣಿ ಭರವಸೆ

Spread the love

ಬೆಳಗಾವಿ: ‘ಹಳೆ ಪಿಂಚಣಿ ಅನುಷ್ಠಾನ, ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆ ಭರ್ತಿ, ಬಡ್ತಿಯಲ್ಲಾದ ದೋಷ ಸರಿಪಡಿಸುವುದು ಸೇರಿದಂತೆ ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಭರವಸೆ ನೀಡಿದರು.

 

ನಗರದಲ್ಲಿ ಸೋಮವಾರ ನಡೆದ ಬೆಳಗಾವಿ ಜಿಲ್ಲಾ ಘಟಕದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವಾರ್ಷಿಕ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಹಲವು ವರ್ಷಗಳಿಂದ ಶಿಕ್ಷಕರ ಸಮಸ್ಯೆಗಳು ಬಾಕಿ ಇವೆ. ಹಂತಹಂತವಾಗಿ ಎಲ್ಲವನ್ನೂ ಬಗೆಹರಿಸಲಾಗುವುದು’ ಎಂದರು.

ಶಾಸಕ ಆಸಿಫ್‌ ಶೇಠ್‌, ‘ಶಾಲೆಗಳ ಮೂಲ ಸೌಕರ್ಯ ಸರಿಪಡಿಸುವುದರ ಜೊತೆಗೆ ಬದಲಾಗುತ್ತಿರುವ ಪದ್ಧತಿಗೆ ಅನುಗುಣವಾಗಿ ಆಧುನಿಕ ಸ್ಪರ್ಶ ನೀಡಲು ಶ್ರಮಿಸುತ್ತಿದ್ದೇನೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಂ. ಪಾಟೀಲ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಾಮು ಗುಗವಾಡ ಮಾತನಾಡಿದರು.

ಡಿಡಿಪಿಐ ಮೋಹನಕುಮಾರ ಹಂಚಾಟಿ, ಕ್ಷೇತ್ರಶಿಕ್ಷಣಾಧಿಕಾರಿಗಳಾದ ಎಸ್.ಪಿ. ದಾಸಪ್ಪನವರ, ಮೋಹನ ದಂಡಿನ, ಸಂಘದ ಸಂಘಟನಾ ಕಾರ್ಯದರ್ಶಿ ತುಕಾರಾಂ ಬಾಗೆನ್ನವರ, ಉಪಾಧ್ಯಕ್ಷ ಶಿವಾನಂದ ಮಳಗಲಿ, ಎಂ.ಎಸ್. ತಲ್ಲೂರ, ಎಲ್.ಎಸ್. ಬಹದ್ದೂರಿ, ಬಿ.ಎಸ್. ಗಾಣಿಗೇರ, ಬಿಆರ್‌ಸಿ ಎಂ.ಎಸ್. ಮೇದಾರ, ಪರಶುರಾಮ ಪಾಂಡವ ಹಾಗೂ ವಿವಿಧ ತಾಲ್ಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ಅಶೋಕ ಖೋತ ಸ್ವಾಗತಿಸಿದರು. ಸುಮಿತ್ರಾ ಕರವಿನಕೊಪ್ಪ ನಿರೂಪಿಸಿದರು. ಶಿವಾನಂದ ತಲ್ಲೂರ ನಿರ್ವಹಿಸಿದರು. ವೀರೇಶ ಗಣಾಚಾರಿ ವಂದಿಸಿದರು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ