Breaking News

ಗೋವಾ, ಗುಜರಾತ್​, ಅಸ್ಸಾಂನಲ್ಲಿ ಲೋಕಸಭಾ ಅಭ್ಯರ್ಥಿಗಳ ಘೋಷಿಸಿ ಕಾಂಗ್ರೆಸ್​ಗೆ ಸಂದೇಶ ರವಾನಿಸಿದ ಆಮ್​ ಆದ್ಮಿ ಪಕ್ಷ

Spread the love

Aam Aadmi Party)ವು ಮೂರು ರಾಜ್ಯಗಳಲ್ಲಿ ಲೋಕಸಭಾ ಅಭ್ಯರ್ಥಿ(Lok Sabha Candidates)ಗಳನ್ನು ಘೋಷಿಸುವ ಮೂಲಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ(I.N.D.I.A)ದ ಒತ್ತಡವನ್ನು ಮತ್ತಷ್ಟು ಹೆಚ್ಚಿಸಿದೆ. ಆಮ್​ ಆದ್ಮಿ ಪಕ್ಷವು ಗುಜರಾತ್‌ನಲ್ಲಿ ಎರಡು ಸ್ಥಾನಗಳಿಗೆ ಮತ್ತು ಮುಂಬರುವ ಲೋಕಸಭೆ ಚುನಾವಣೆಗೆ ಗೋವಾದಲ್ಲಿ ಒಂದು ಸ್ಥಾನಕ್ಕೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿಯ ಸಭೆಯಲ್ಲಿ ಗೋವಾ ಮತ್ತು ಗುಜರಾತ್‌ನಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ದೆಹಲಿಯಲ್ಲಿ 7 ಲೋಕಸಭಾ ಸ್ಥಾನಗಳ ಪೈಕಿ ಕೇವಲ 1 ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡುವುದಾಗಿ ಈಗಾಗಲೇ ತಿಳಿಸಿದೆ. ಈ ಒಂದು ಸ್ಥಾನಕ್ಕೂ ಕಾಂಗ್ರೆಸ್​ ಅರ್ಹವಿಲ್ಲ ಆದರೆ ಮೈತ್ರಿ ಧರ್ಮ ಬಿಡಬಾರದೆಂದು ಒಂದು ಸ್ಥಾನ ನೀಡುತ್ತಿದ್ದೇವೆ ಎಂದು ಎಎಪಿ ಹೇಳಿದೆ.

ಕಳೆದ ವಾರ, ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಅಸ್ಸಾಂನ ಗುವಾಹಟಿ, ಸೋನಿತ್‌ಪುರ ಮತ್ತು ದಿಬ್ರುಗಢ ಲೋಕಸಭಾ ಕ್ಷೇತ್ರಗಳಿಂದ ತನ್ನ ಅಭ್ಯರ್ಥಿಗಳನ್ನು ಏಕಪಕ್ಷೀಯವಾಗಿ ಘೋಷಿಸಿತು. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಅಭ್ಯರ್ಥಿಗಳ ಅರ್ಹತೆ ಮತ್ತು ಗೆಲುವಿನ ಆಧಾರದ ಮೇಲೆ ಗೋವಾ, ಗುಜರಾತ್ ಮತ್ತು ಅಸ್ಸಾಂನಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎಎಪಿ ನಾಯಕ ಸಂದೀಪ್ ಪಾಠಕ್ ಹೇಳಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ