ಬೆಂಗಳೂರು: ರಾಜ್ಯಸಭೆಗೆ ಕೈ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಲೋಕಸಭೆ ಟಿಕೆಟ್ ಹಂಚಿಕೆ ಕುರಿತು ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಜೋರಾಗಿದೆ. ಕೈ ನಲ್ಲಿ ಟಿಕೆಟ್ ವಾರ್ ನಡೆಯುತ್ತಿರುವುದು ಸಿಎಂ ಸಿದ್ದ ರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ. ಇರಿಬ್ಬರ ಶೀತಲ ಸಮರ ಮತ್ತೆ ಮುಂದುವರಿದಿದೆ.
ತಮ್ಮ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಇಬ್ಬರು ಪೈಪೋಟಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಇದರಿಂದ ಹೈಕಮಾಂಡ್ ಇಕ್ಕಟ್ಟಿಗೆ ಸಿಲಿಕಿದೆ. ಆದ್ದರಿಂದ ಅಭ್ಯರ್ಥಿಗಳ ಆಯ್ಕೆ ಇನ್ನು ಪೂರ್ಣಗೊಂಡಿಲ್ಲ ಎಂದು ತಿಳಿದು ಬಂದಿದೆ.
ಏತನ್ಮಧ್ಯೆ ಡಿಕೆಶಿ ಅವರು, ಮತ್ತೊಂದು ಸಮೀಕ್ಷೆ ನಡೆಸಿ ಅಭ್ಯರ್ಥಿ ಅಂತಿಮ ಪಟ್ಟಿ ತಯಾರಿಗೆ ನಿರ್ಧರಿಸಲಾಗಿದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಎಲ್ಲವೂ ಕ್ರಮಬದ್ಧವಾಗಿ ನಡೆದರೆ ಕಾಂಗ್ರೆಸ್ ಗೆ ಲಾಭ. ಇಲ್ಲದಿದ್ದರೆ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಿದ್ದಾರೆ.