Breaking News

ಕಿಮ್ಸ್‌ ಪಕ್ಕದ ಚರಂಡಿಯಲ್ಲಿ ಶವ ಪತ್ತೆ

Spread the love

ಹುಬ್ಬಳ್ಳಿ: ಇಲ್ಲಿನ ಕಿಮ್ಸ್‌ ಆಸ್ಪತ್ರೆಯ ಹಾಸ್ಟೆಲ್‌ ಆವರಣ ಗೋಡೆಗೆ ಹೊಂದಿಕೊಂಡ ಚರಂಡಿಯಲ್ಲಿ ಅಪರಿಚಿತ ಶವವೊಂದು ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.

ಚರಂಡಿ ಸ್ವಚ್ಛತೆ ಕೈಗೊಂಡಿದ್ದ ಸಂದರ್ಭದಲ್ಲಿ ಶವದ ಅಸ್ಥಿಪಂಜರ ಮತ್ತು ತಲೆಬುರುಡೆ ಸಿಕ್ಕಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಹಲವು ತಿಂಗಳುಗಳ ಹಿಂದೆಯೇ ದೇಹ ಚರಂಡಿಗೆ ಬಿದ್ದಿರಬಹುದು ಎನ್ನುವ ಅನುಮಾನವಿದ್ದು, ಇದು ಕೊಲೆಯೋ ಅಥವಾ ಸಹಜ ಸಾವಾಗಿದೆಯೋ ಎಂಬುದನ್ನು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮಹಿಳೆಯ ರಕ್ಷಣೆ: ಇಲ್ಲಿನ ನವನಗರದ ಮನೆಯೊಂದರಲ್ಲಿ ಮಹಿಳೆಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಇದೇ ವೇಳೆ, ಓರ್ವ ಮಹಿಳೆಯನ್ನು ರಕ್ಷಿಸಿದ್ದಾರೆ.

ಮನೆ ಮಾಲೀಕ ಹಾಗೂ ಒಬ್ಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ