ಸಿಎಂ(CM) ಸಿದ್ದರಾಮಯ್ಯ(Siddaramaiah) ಅವರು ಇಂದು 15ನೇ ಬಜೆಟ್(Budget) ಮಂಡಿಸಲಿದ್ದಾರೆ. ಲೋಕಸಭಾ(Loka Saba) ಚುನಾವಣೆ ಹಿನ್ನೆಲೆಯಲ್ಲಿ ಯಾವೆಲ್ಲ ಘೋಷಣೆಯನ್ನು ಮಾಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. ಇಂದು ಬೆಳಗ್ಗೆ ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ ಪಡೆಯಲಿದ್ದಾರೆ.
ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ.
ರಾಜ್ಯ ಬಜೆಟ್ ಬಗ್ಗೆ ತೀವ್ರತರವಾದಂತಹ ನಿರೀಕ್ಷೆಗಳಿದ್ದು, ಯಾವ ಯಾವ ಕ್ಷೇತ್ರಗಳಿಗೆ ಅನುದಾನ, ಯಾರಿಗೆಲ್ಲ ಬಂಪರ್ ಗಿಫ್ಟ್ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ. ಈ ಬಜೆಟ್ ರಾಜ್ಯಕ್ಕೆ ಹೊಸ ದಿಕ್ಸೂಚಿ ಕೊಡಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಜನರು ಅದರಲ್ಲೂ ರೈತರು ತಮಗೇನು ಘೋಷಣೆಯಾಗಲಿದೆ ಎಂದು ಕಾಯುತ್ತಿದ್ದಾರೆ. ಆದರೆ, ಯಾವುದೇ ನಿರೀಕ್ಷೆಗಳಿಲ್ಲ, ಕಿವಿಗೆ ಹೂವು ಗ್ಯಾರಂಟಿ ಎಂದು ವಿಪಕ್ಷಗಳ ನಾಯಕರು ಹೇಳುತ್ತಿದ್ದಾರೆ.
Laxmi News 24×7