Breaking News

ಕಲ್ಲಂಗಡಿ ತಿನ್ನಲು ಅಂಗಡಿಗೆ ಬಂದ ಕಾಡಾನೆ,

Spread the love

ಆನೇಕಲ್, ಫೆ.17: ತಮಿಳುನಾಡು ಹಾಗೂ ಕರ್ನಾಟಕ ಗಡಿ ಭಾಗದಲ್ಲಿಕಾಡಾನೆಗಳ(Wild Elephant) ಹಾವಳಿ ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರಿನ ಆನೇಕಲ್​ ತಾಲೂಕಿನ ಬಳಿ ಇರುವ ತಮಿಳುನಾಡಿಗೆ (Tamil Nadu) ಡೆಂಕಣಿಕೋಟೆ ಗ್ರಾಮಕ್ಕೆ ಒಂಟಿ ಸಲಗ ನುಗ್ಗಿದೆ.

ಮುಂಜಾನೆ 5 ಗಂಟೆಯ ಸುಮಾರಿಗೆ ಗ್ರಾಮದ ಸುತ್ತಲೂ ಅಡ್ಡಾಡಿದ ಒಂಟಿ ಸಲಗ, ರಸ್ತೆ ಬದಿಯಲ್ಲಿ ಕಲ್ಲಂಗಡಿ ಅಂಗಡಿ ಬಳಿ ಹೋಗಿದೆ. ಈ ವೇಳೆ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ ಅಂಗಡಿ ವ್ಯಾಪಾರಸ್ಥರಾದ ದಂಪತಿಗೆ ಇತರೆ ಗ್ರಾಮಸ್ಥರು ಬೊಬ್ಬೆ ಹಾಕಿ ಎಬ್ಬಿಸಿ ಓಡುವಂತೆ ಹೇಳಿದ್ದಾರೆ.

ಅದರಂತೆ ದಂಪತಿ ಎದ್ನೋ ಬಿದ್ನೋ ಎಂದು ಅಲ್ಲಿಂದ ಓಡಿದರು. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ದಂಪತಿ ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ