Breaking News

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ.

Spread the love

ಗೋಕಾಕ : ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.

ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಅವರಣದಲ್ಲಿ ಶ್ರೀ ಮಾರುತೇಶ್ವರ ದೇವರ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.

ಈ ವಿಶೇಷ ಪೂಜೆ ಸಂದರ್ಭದಲ್ಲಿ ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ ಅವರು ಹಾಗೂ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಹಿರೇನಂದಿ ಗ್ರಾಮದಿಂದ ಕಾರ್ಖಾನೆಯವರೆಗೆ ಭವ್ಯ ಶೋಭಾಯಾತ್ರೆ ಹಮ್ಮಿಕೊಂಡಿದ್ದು ಈ ಶೋಭಾಯಾತ್ರೆಯಲ್ಲಿ ಸಾವಿರಾರು ಮಹಿಳೆಯರು ಕುಂಭಮೇಳ ಮಾಡಿದರು, ಉತ್ಸಾಹದಿಂದ ಯುವಕರು ಗುಲಾಲದಲ್ಲಿ ಕುಣಿದು ಕುಪ್ಪಳಿಸಿದರು.

ನಂತರ ಊರಿನ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಹಾಗೂ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವನ್ನು ಪಾಶ್ಚಾಪುರ ವಿಶ್ವರಾಜರು ಪಟ್ಟದ ಸ್ವಾಮಿಜೀ, ಶ್ರೀ ಸಿದ್ದಯ್ಯ ಸ್ವಾಮಿಜೀ, ಶ್ರೀ ಶಿವಯ್ಯ ಸ್ವಾಮಿಜೀ, ಶ್ರೀ ಗದಗಯ್ಯ ಶಾಸ್ತ್ರಿಜೀ, ವಿನಯ್ ಹಿರೇಮಠ, ಮಲ್ಲಯ್ಯ ಹಿರೇಮಠ, ಸಚಿನ ಅವಧೂತರು, ಪ್ರಶಾಂತ್ ಪಾಟೀಲ ಹಾಗೂ ಊರಿನ ಹಿರಿಯರು ಮುಖಂಡರು ರೈತರು ಕಾರ್ಖಾನೆ ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ