ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಪ್ರಕರಣದ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಮೊದಲಿನಿಂದಲೂ ಅನುಕಂಪ(Sympathy) ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಆರೋಪಿಗಳ ಬಿಡುಗಡೆಗಾಗಿ ಲೆಟರ್ ಕೊಡುವುದು, ಒತ್ತಾಯ ಮಾಡುವುದು ನಡೆದೇ ಇತ್ತು ಎಂದು ಕಿಡಿಕಾರಿದ್ದಾರೆ.
Laxmi News 24×7