ಮಂಗಳೂರು (Mangaluru): ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಅವರು ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ (congress) ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ?
ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಪ್ರಶ್ನಿಸಿದರು.
ದಕ್ಷಿಣ ಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆ ಎಂದರು.
ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ? ಹೇಳಿ ಎಂದು ನೆರೆದಿದ್ದ ಜನಸ್ತೋಮಕ್ಕೆ ಮುಖ್ಯಮಂತ್ರಿಗಳು ಕೇಳಿದರು. ಜನರು ಇಲ್ಲ, ಇಲ್ಲ, ಏನಿಲ್ಲ ಎಂದು ಕೂಗಿದರು.
Laxmi News 24×7