Breaking News

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಬದಲಾಗಿ,ರಮೇಶ್ ಜಾರಕಿಹೊಳಿ…..

Spread the love

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಬದಲಾಗಿ,ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಮೇಶ್ ಜಾರಕಿಹೊಳಿ ಅವರು ಈಗ ಬೆಳಗಾವಿ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಾರೆ.ಕೋರೆ,ಕತ್ತಿ ಸಹೋದರರ ಕಿತ್ತಾಟದ ಬಳಿಕ ಜಾರಕಿಹೊಳಿ ಸಾಹುಕಾರ್ ಗೆ ಅದೃಷ್ಠ ಒಲಿದಿದೆ.


ಮೈತ್ರಿ ಸರ್ಕಾರದ ಪತನದ ರೂವಾರಿ ರಮೇಶ್ ಜಾರಕಿಹೊಳಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅಲ್ಲದೇ ಬಿಜೆಪಿ ಸರ್ಕಾರದಲ್ಲಿ ಹಠಕ್ಕೆ ಬಿದ್ದು ಜಲಸಂಪನ್ಮೂಲ ಖಾತೆ ತಮ್ಮದಾಗಿಸಿಕೊಂಡಿದ್ದರು. ಇದೀಗ ಬೆಳಗಾವಿ ಉಸ್ತುವಾರಿ ಆಗಿರುವ ರಮೇಶ್ ಜಾರಕಿಹೊಳಿ ಮತ್ತೊಮ್ಮೆ ಮೇಲುಗೈ ಸಾಧಿಸಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ಬೆಲೆ ಏರಿಕೆ: ಲಕ್ಷ್ಮೀ ಹೆಬ್ಬಾಳಕರ್ ಕಿಡಿ

Spread the loveಬೆಳಗಾವಿ: ‘ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ