Breaking News

ವಿದ್ಯಾರ್ಥಿಗಳಿಂದ ಕಾರು ಸ್ವಚ್ಛಗೊಳಿಸಿದ ಶಾಲಾ ಮುಖ್ಯ ಶಿಕ್ಷಕ

Spread the love

ವಿಜಯಪುರ, ಫೆ.18: ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಶೌಚಾಲಯಗಳನ್ನು ಸ್ವಚ್ಛಗೊಳಿಸುವುದು, ಶಿಕ್ಷಕರ ಸ್ವಂತ ಕೆಲಸಕ್ಕೆ ಬಳಸುವ ಪ್ರಕರಣಗಳು ನಡೆಯುತ್ತಿವೆ. ಇದೀಗವಿಜಯಪುರ (Vijayapura)ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ವಿರೇಶ್ವರ ವೃತ್ತದ ಬಳಿಯ ಶಾಸಕರ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ತನ್ನ ಕಾರನ್ನು ವಿದ್ಯಾರ್ಥಿಗಳಿಂದ ಸ್ವಚ್ಛಗೊಳಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ವಿಜಯಪುರ: ವಿದ್ಯಾರ್ಥಿಗಳಿಂದ ಕಾರು ಸ್ವಚ್ಛಗೊಳಿಸಿದ ಶಾಲಾ ಮುಖ್ಯ ಶಿಕ್ಷಕ

ಮುಖ್ಯ ಶಿಕ್ಷಕ ಬಸವರಾಜ ರಕ್ಕಸಗಿ ಅವರು ಶಾಲಾ ಆವರಣದಲ್ಲಿಯೇ ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಸ್ವಚ್ಚ ಮಾಡಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಕಾರ್ ಸ್ವಚ್ಛ ಮಾಡುತ್ತಿರುವ ವಿಡಿಯೋ ಸ್ಥಳಿಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು, ವಿದ್ಯಾರ್ಥಿಗಳನ್ನು ಸ್ವಂತ ಕೆಲಸಕ್ಕೆ ಬಳಕೆ ಮಾಡಿಕೊಂಡ ಮುಖ್ಯ ಶಿಕ್ಷಕನ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಶಾಲೆಗಳಲ್ಲಿ ಮಕ್ಕಳನ್ನು ಪಠ್ಯ, ಕ್ರೀಡೆ ಹೊರತಾಗಿ ಇತರೆ ಕೆಲಸಕ್ಕೆ ಬಳಕೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯವಾಗಿ ನಿಷೇಧಿಸಿತ್ತು. ಇದೀಗ ನಿಷೇಧದ ನಡುವೆಯೂ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ವಂತ ಕೆಲಸಕ್ಕೆ ಬಳಸುವ ಪ್ರಕರಣಗಳು ನಡೆಯುತ್ತಲೇ ಇವೆ.


Spread the love

About Laxminews 24x7

Check Also

ಸ್ವಚ್ಛತಾ ರಾಯಭಾರಿಯಾಗಿ ದೇಶದ ಗಮನ ಸೆಳೆದಿದ್ದ ಪೆರುವಾಯಿ ಗ್ರಾಪಂ ಅಧ್ಯಕ್ಷೆ ನೆಫೀಸಾ ಲೋಕಾಯುಕ್ತ ಬಲೆಗೆ

Spread the loveಬಂಟ್ವಾಳ: ಕಸ ಸಂಗ್ರಹಣಾ ವಾಹನವನ್ನು ತಾವೇ ಚಲಾಯಿಸುವ ಮೂಲಕ ಗಮನ ಸೆಳೆದು, ಕಳೆದ ವರ್ಷ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ