ಮರೆಯಾಗಿರುವ ನಮ್ಮ ಮಣ್ಣಿನ ಬ್ಯಾಂಕುಗಳು ಕರ್ಣಾಟಕ ಬ್ಯಾಂಕ್‌ನಲ್ಲಿ ವಿಲೀನವಾಗಬೇಕು: ಡಿಕೆಶಿ

Spread the love

ಮಂಗಳೂರು: ಯಾರ ಪ್ರಮಾದವೋ ಏನೋ, ನಮ್ಮ ಮಣ್ಣಿನಲ್ಲಿ ಹುಟ್ಟಿದ ಸಿಂಡಿಕೇಟ್, ಕಾರ್ಪೋರೇಶನ್ ಬ್ಯಾಂಕ್‌ಗಳು ಕಣ್ಮರೆಯಾಗಿವೆ. ಹೀಗಾಗಿ ನಮ್ಮ ಮಣ್ಣಿನಲ್ಲಿ ಹುಟ್ಟಿ ಕಣ್ಮರೆಯಾಗಿರುವ ಬ್ಯಾಂಕುಗಳು ಹಾಗೂ ಇತರೆ ಬ್ಯಾಂಕ್‌ಗಳನ್ನು ಕರ್ಣಾಟಕ ಬ್ಯಾಂಕ್ (Karnataka Bank) ಜತೆ ವಿಲೀನ ಮಾಡಿಕೊಳ್ಳುವಂತಾಗಬೇಕು ಎಂದು ಡಿಸಿಎಂ ಡಿ.ಕೆ.

ಶಿವಕುಮಾರ್ ತಿಳಿಸಿದರು.

ನಗರದಲ್ಲಿ ನಡೆದ ಕರ್ಣಾಟಕ ಬ್ಯಾಂಕ್‌ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿಮ್ಮ ಮುಂದಿನ ಗುರಿ ನಾವು ಕಳೆದುಕೊಂಡಿರುವ ನಮ್ಮ ಮಣ್ಣಿನ ಬ್ಯಾಂಕುಗಳನ್ನು ಮತ್ತೆ ಕರ್ಣಾಟಕ ಬ್ಯಾಂಕ್ ಮೂಲಕ ಮತ್ತೆ ವಾಪಸ್ ಪಡೆದು, ನಮ್ಮ ಗೌರವ ಸ್ವಾಭಿಮಾನ ಮರಳಿ ಪಡೆಯುವುದು. ಈ ಬಗ್ಗೆ ಕರ್ಣಾಟಕ ಬ್ಯಾಂಕಿನ ಸದಸ್ಯರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪಣ ತೊಡಬೇಕು ಎಂದು ಹೇಳಿದರು.

ಈ ಬ್ಯಾಂಕಿನ ಬಗ್ಗೆ ನನ್ನ ಸ್ನೇಹಿತರ ಬಗ್ಗೆ ಸಾಕಷ್ಟು ವಿಚಾರ ಕೇಳಿದ್ದೇನೆ. ಇದು ಕೇವಲ ಉದ್ಯಮಕ್ಕೆ ಮಾತ್ರ ನೆರವಾಗುವುದಿಲ್ಲ. ಗ್ರಾಮೀಣ ಭಾಗದ ಜನಸಾಮಾನ್ಯರಿಗೂ ಸೇವೆ ಸಲ್ಲಿಸುತ್ತಿದೆ. ಈ ಸಮಾರಂಭಕ್ಕೆ ಬಂದು, ₹100 ನಾಣ್ಯ, ಅಂಚೆ ಚೀಟಿ ಬಿಡುಗಡೆ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ಈ ಸಮಾರಂಭಕ್ಕೆ ನನಗಿಂತ ಉನ್ನತ ಸ್ಥಾನದಲ್ಲಿರುವ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಗಮಿಸಬೇಕಿತ್ತು. ಆದರೂ ನನ್ನ ಕೈಯಲ್ಲಿ ಇವುಗಳ ಅನಾವರಣ ಮಾಡಿಸಿದ್ದು ನೋಡಿ ನನಗೆ ಪುರಂದರ ದಾಸರ ಪದ ನೆನಪಾಗುತ್ತಿದೆ. ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯ ಪದುಭನಾಭನ ಪಾದ ಭಜನೆ ಪರಮ ಸುಖವಯ್ಯ ಎಂದರು.

ಈ ಕಾರ್ಯಕ್ರಮಕ್ಕೆ ಬಹಳ ಸಂತೋಷದಿಂದ, ಉತ್ಸುಕತೆಯಿಂದ, ದೂರದೃಷ್ಟಿಯೊಂದಿಗೆ ಬಂದಿದ್ದೇನೆ. ನನಗೆ ದಕ್ಷಿಣ ಕನ್ನಡ ಭಾಗದ ಬ್ಯಾಂಕಿಂಗ್ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಈ ಭಾಗ ಇತಿಹಾಸವನ್ನೇ ಹೊಂದಿದೆ. ಈ ಬ್ಯಾಂಕಿನ ಇತಿಹಾಸ ನೋಡಿದಾಗ ನೀವು ಬೆಳೆದು ಬಂದ ದಾರಿ ಕಾಣಿಸಿತು. ನೀವು ನಿಮ್ಮ ಮೂಲ ಮರೆತರೆ ಮುಂದೆ ಯಶಸ್ಸು ಸಿಗುವುದಿಲ್ಲ. ನೀವು ನಿಮ್ಮ ಹಾದಿಯನ್ನು ಯಾವತ್ತೂ ಬದಲಿಸಿಲ್ಲ. ಶಿವರಾಂ ಕಾರಂತ ಅವರು ರಂಗೋಲಿಯನ್ನು ಈ ಬ್ಯಾಂಕಿನ ಚಿಹ್ನೆಯಾಗಿ ನೀಡಿದ್ದಾರೆ. ಅದಕ್ಕೆ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಿ- ಕಡಾಡಿ

Spread the love ಬೆಳಗಾವಿ: ‘ಇಂದಿನ ಮಕ್ಕಳು ಮತ್ತು ಯುವಜನರು ವಿದ್ಯಾರ್ಥಿ ಹಂತದಿಂದಲೇ ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ರಾಜ್ಯಸಭಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ