Breaking News

ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಬಿ.ಎಸ್. ಯಡಿಯೂರಪ್

Spread the love

ಬೆಂಗಳೂರು:  ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು  ತಾಲೂಕು ಕೇಂದ್ರಗಳಲ್ಲಿ  ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದ್ರು. 

ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ,  ರಾಯಚೂರು ಮತ್ತು ಉಡುಪಿ   ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಪಂ ಇಸಿಒ, ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಮಾತನಾಡಿದರು.

ಅಧಿಕಾರಿಗಳು  ತಾಲೂಕುಗಳನ್ನು ವಿಭಾಗಿಸಿಕೊಂಡು ತಾಲೂಕು  ಕೇಂದ್ರದಲ್ಲಿ  ಮೊಕ್ಕಾಂ ಹೂಡಿ ಮೇಲ್ವಿಚಾರಣೆ ಮಾಡುವಂತೆ ಸೂಚಿಸಿದರು.  ಜೂ. 8 ರಿಂದ ಸರ್ಕಾರ ಲಾಕ್ ಡೌನ್  ಸಡಲಿಕೆಗಳನ್ನು ಮಾಡುತ್ತಿರುವುದರಿಂದ ಕಟ್ಟೆಚ್ಚರ ವಹಿಸಿ, ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ವಲಸಿಗರಿಂದ ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಣಕ್ಕೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಕೋವಿಡ್ 19 ಪರೀಕ್ಷಾ ಕಿಟ್‍ಗಳ ಪೂರೈಕೆಯಲ್ಲಿ ವ್ಯತ್ಯಾಸವಾಗಬಾರದು. ಹೋಮ್ ಕ್ವಾರಂಟೈನ್ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಬೇಕು.

ಪೋಲೀಸ್ ಇಲಾಖೆ ವತಿಯಿಂದ ಗೃಹ ಬಂಧನದಲ್ಲಿರುವವರ ಮನೆಯ ಬಳಿ ಪೇದೆಗಳನ್ನು ನಿಯೋಜಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ಇವರ ಬಗ್ಗೆ ನಿಗಾ ವಹಿಸಬೇಕು. ಗ್ರಾಮ ಪಂಚಾಯತಿಗಳ ಸದಸ್ಯರಿಗೆ ಈ ಬಗ್ಗೆ ತರಬೇತಿಯನ್ನೂ ನೀಡಲಾಗಿದ್ದು, ಬೂತ್ ಮಟ್ಟದ ತಂಡಗಳೂ ಪ್ರತಿ ದಿನ ವರದಿ ಸಲ್ಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹೋಮ್ ಕ್ವಾರಂಟೈನ್ ಉಲ್ಲಂಘನೆಯಾದರೆ ಎಫ್.ಐ.ಆರ್ ದಾಖಲಿಸಬೇಕು ಎಂದು ನಿರ್ದೇಶಿಸಿದರು. ಗಡಿ ಭಾಗಗಳಿರುವ ಜಿಲ್ಲೆಗಳು ಕಟ್ಟುನಿಟ್ಟಾಗಿ ಗಡಿ ಪ್ರದೇಶಗಳನ್ನು ಕಾಯ್ದು, ಅಕ್ರಮ ಪ್ರವೇಶವನ್ನು ತಡೆಯಬೇಕು. ಮೃತ ದೇಹಗಳನ್ನು ಯಾವುದೇ ಕಾರಣಕ್ಕೂ ರಾಜ್ಯದೊಳಗೆ ತರದಂತೆ ನೋಡಿಕೊಳ್ಳಬೇಕೆಂದು ನಿರ್ದೇಶಿಸಿದರು.

ಎಸ್.ಎಸ್.ಎಲ್.ಸಿ / ಪಿ.ಯು.ಸಿ ಪರೀಕ್ಷಾ ದಿನಾಂಕಗಳು ನಿಗದಿಯಾಗಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ ಅಖ್ತರ್ ಹಾಗೂ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ