Breaking News

ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮ: ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ ಎಫ್​ಐಆರ್

Spread the love

ಮೈಸೂರು, ಫೆ.19: ಸರ್ಕಾರಿ ದಾಖಲೆಗಳನ್ನು ತಿದ್ದಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಹಿನ್ನೆಲೆ ಪೌರಾಯುಕ್ತ, ಕಂದಾಯ ಸಿಬ್ಬಂದಿಯ ವಿರುದ್ಧ ಸೆಕ್ಷನ್ 420 ಅಡಿ ಪ್ರಕರಣ ದಾಖಲಾಗಿದೆ. ಸರ್ಕಾರಿ ದಾಖಲೆಗಳನ್ನು (Government Documents) ತಿದ್ದಿ ಕೆಲವು ಕಡತಗಳನ್ನು ನಾಪತ್ತೆ ಮಾಡಲಾಗಿದೆ. ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಲಾಗಿದೆ. ಈ ಹಿನ್ನೆಲೆ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ (Nanjangud Town Police Station) ಎಫ್​ಐಆರ್ ದಾಖಲಾಗಿದೆ.

 

ಸರ್ಕಾರಿ ದಾಖಲೆಗಳನ್ನು ತಿದ್ದಿ ಅಕ್ರಮ: ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ ಎಫ್​ಐಆರ್

ಹಾಲಿ ಪೌರಾಯುಕ್ತ ನಂಜುಂಡಸ್ವಾಮಿ ದೂರು ಹಿನ್ನೆಲೆ ನಗರಸಭೆ ಹಿಂದಿನ ಪೌರಾಯುಕ್ತ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಂಜನಗೂಡು ತಾಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಭಾರೀ ಅಕ್ರಮ ನಡೆದಿದೆ. ದೇವೀರಮ್ಮನಹಳ್ಳಿ ಸರ್ವೆ ನಂ 58,59 ರ ವಿಸ್ತೀರ್ಣ 3.16 ಬಿ.ಬಸಪ್ಪ ಎಂಬುವರಿಗೆ ಸೇರಿದೆ. ಕೈಗಾರಿಕಾ ಉದ್ದೇಶಕ್ಕಾಗಿ ಉಪವಿಭಾಗಾಧಿಕಾರಿಗಳು ಅನ್ಯಕ್ರಾಂತ ಮಂಜೂರು ಮಾಡಿದ್ದಾರೆ. ನಂತರ ವಸತಿ ಬಡಾವಣೆ ನಿರ್ಮಿಸಲು ಬದಲಾವಣೆ ಸಹ ಆದೇಶ ಮಾಡಿದ್ದಾರೆ. ವಸತಿ ಮನೆ ನಿರ್ಮಿಸಬೇಕಿದ್ದಲ್ಲಿ ಮೈಸೂರು-ನಂಜನಗೂಡು ಯೋಜನಾ ಪ್ರಾಧಿಕಾರದಿಂದ ಅಧಿಕೃತ ಬಡಾವಣೆ ನಕ್ಷೆ ಅನುಮೋದನೆ ಪಡೆಯಬೇಕಿತ್ತು. ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಅನುಮೋದನೆ ಆಗಿಲ್ಲ. ಹಿಂದಿನ ಪೌರಾಯುಕ್ತ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕರಾದ ಡಿ.ಎನ್.ನರಸಿಂಹಮೂರ್ತಿ ಸಂಖ್ಯೆ 106 ರ ಆಸ್ತಿ ವಹಿಯಲ್ಲಿ ನಿವೇಶನ ಸಂಖ್ಯೆ 1 ರಿಂದ 48 ರವರೆಗೆ ವಿವಿಧ ಅಸೆಸ್ ಮೆಂಟ್​ಗಳಲ್ಲಿ ವಿವಿಧ ಅಳತೆಗಳನ್ನು ನಮೂದಿಸಿ ಗಂಗಮ್ಮ ಎಂಬುವರ ಹೆಸರಿಗೆ ಖಾತೆ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಸ್ವಚ್ಛತಾ ರಾಯಭಾರಿಯಾಗಿ ದೇಶದ ಗಮನ ಸೆಳೆದಿದ್ದ ಪೆರುವಾಯಿ ಗ್ರಾಪಂ ಅಧ್ಯಕ್ಷೆ ನೆಫೀಸಾ ಲೋಕಾಯುಕ್ತ ಬಲೆಗೆ

Spread the loveಬಂಟ್ವಾಳ: ಕಸ ಸಂಗ್ರಹಣಾ ವಾಹನವನ್ನು ತಾವೇ ಚಲಾಯಿಸುವ ಮೂಲಕ ಗಮನ ಸೆಳೆದು, ಕಳೆದ ವರ್ಷ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ