Breaking News

ಕುಟುಂಬ ಸಮೇತ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಕೆ.ಎಲ್.ರಾಹುಲ್

Spread the love

ತುಮಕೂರು: ತುಮಕೂರಿನ ಸಿದ್ದಗಂಗಾ ಮಠಕ್ಕೆ ಕ್ರಿಕೆಟ್ ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಕುಟುಂಬ ಸಮೇತ ಭೇಟಿ ಕೊಟ್ಟಿದ್ದಾರೆ.
ಡಾ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಹುಲ್, ಸಿದ್ದಗಂಗಾ ಮಠಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಗಳ ಆಶಿರ್ವಾದ ಪಡೆದಿದ್ದಾರೆ.

 

ತಂದೆ ಲೋಕೇಶ್, ತಾಯಿ ಲೋಕೇಶ್ವರಿ ಅವರೊಂದಿಗೆ ಕುಟುಂಬ ಸಮೇತರಾಗಿ ಕೆ.ಎಲ್ ರಾಹುಲ್ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

 

 

ರಾಹುಲ್ ತಂದೆ ಲೋಕೇಶ್ ಕೂಡ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಣ್ಣೂರು ಮೂಲದವರಾಗಿದ್ದು, ಸಿದ್ಧಗಂಗಾ ಮಠದ ಪರಮ ಭಕ್ತರಾಗಿದ್ದಾರೆ.

ಸಿದ್ಧಲಿಂಗ ಶ್ರೀಗಳು ಕ್ರಿಕೆಟ್ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ರಾಹುಲ್ ಪ್ರತಿಭೆಯನ್ನು ಪ್ರಶಂಸಿ ಇನ್ನು ಎತ್ತರಕ್ಕೆ ಬೆಳೆಯುವಂತೆ ಆಶಿರ್ವಾದ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ