Breaking News

35 ವರ್ಷ ಜೊತೆಗೆ ಸಂಸಾರ ಮಾಡಿದ್ದೀವಿ, 3 ವರ್ಷ ಆ ಕಡೆ ಹೋಗಿದ್ದರು

Spread the love

ಬೆಂಗಳೂರು: 35 ವರ್ಷ ಜೊತೆಗೆ ನಾವು ಸಂಸಾರ ಮಾಡಿದ್ದೀವಿ. ಇವಾಗ 3 ವರ್ಷ ಅಷ್ಟೇ ಆ ಕಡೆ ಹೋಗಿದ್ದರು ಎಂದು ಎಸ್ ಟಿ ಸೋಮಶೇಖರ್ ಜೊತೆಗಿನ ಫೋಟೋ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದ್ದಾರೆ.

ಮಂಗಳೂರಿನಲ್ಲಿ ಭಾನುವಾರ ನಡೆದ ಕರ್ಣಾಟಕ ಬ್ಯಾಂಕಿನ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್‌ ಮತ್ತು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಜೊತೆಯಾಗಿ ತೆರಳಿದರು.

ಕಾಂಗ್ರೆಸ್ ಕಡೆ ಮುಖ ಮಾಡಿರುವ ಸೋಮಶೇಖರ್‌, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ, ಕಾಂಗ್ರೆಸ್‌ ಸೇರುವ ಬಗ್ಗೆ ಬಹಿರಂಗವಾಗಿ ಅವರು ಎಲ್ಲಿಯೂ ಮಾತನಾಡಿಲ್ಲ.

ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿ.ಕೆ. ಶಿವಕುಮಾರ್‌ ಮತ್ತು ಸೋಮಶೇಖರ್‌ ಅವರು ವಿಶೇಷ ವಿಮಾನದಲ್ಲಿ ತೆರಳಿದರು. ಕಾರ್ಯಕ್ರಮ ಮುಗಿದ ಬಳಿಕ ಅದೇ ವಿಮಾನದಲ್ಲಿ ಮರಳಿದರು.

ಈ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸೋಮಶೇಖರ್ ಬಿಜೆಪಿ ತೊರೆದು ಕಾಂಗ್ರೆಸ್ ಬರುವ ಕುರಿತಾದ ಸುದ್ದಿ ವಿಚಾರವಾಗಿ ಮಾರ್ಮಿಕವಾಗಿ ಉತ್ತರ ನೀಡಿದರು.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ