ಶತಮಾನಗಳೇ ಕಳೆದರೂ ಗುಪ್ತಲಿಂಗ ಬೆಟ್ಟದಲ್ಲಿ ನೀರಿನ ಝರಿ ಬತ್ತಿಲ್ಲ

Spread the love

ಗುಹೆಯಲ್ಲಿರುವ ಶಿವಲಿಂಗದ ಮೂಲಕವೂ ನೀರು ಹರಿದು ಬರುವುದು ಇಲ್ಲಿನ ವಿಶೇಷವಾಗಿದೆ. ಇಲ್ಲಿನ ನೀರಿನ ಝರಿ ದಿನದ 24 ಗಂಟೆಯೂ ನೀರು ಧುಮ್ಮಿಕ್ಕುತ್ತದೆ. ಇಲ್ಲಿ ಬೆಟ್ಟದ ಅಂಚಿನಿಂದ ಬರುವ ನೀರು ನಂದಿ ಬಾಯಿಯಿಂದ ಕಿರು ಕಲ್ಯಾಣಿಗೆ ಬಂದು ಬೀಳುತ್ತದೆ.
ನೀರಿನ ಹರಿವು ಸದಾ ಒಂದೇ ಸಮನಾಗಿರುತ್ತದೆ.ಬೇಸಿಗೆ ಬಂದರೆ ಸಾಕು ಆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಾಂಡವಾಡುತ್ತದೆ. ಬಾವಿ, ಬೋರ್ ವೆಲ್ ನಲ್ಲಿಯೂ ನೀರು ಖಾಲಿಯಾಗಿ ಜನ ಪ್ರಾಣಿ ಪಕ್ಷಿಗಳು ನೀರಿಗಾಗಿ ಹಾಹಾಕಾರ ಪಡುತ್ತವೆ. ಆದರೆ ಆ ದೇವಸ್ಥಾನದಲ್ಲಿ ಶತಮಾನಗಳಿಂದಲೂ ನೀರು (Drinking water) ಬರುವುದು ನಿಂತಿಲ್ಲ… ಈ ನೀರಿಗೆ ಔಷಧಿಯ ಗುಣವಿದ್ದು ನೀರಿನಲ್ಲಿ ಸ್ನಾನ ಮಾಡಿದರೆ ಚರ್ಮ ರೋಗ ವಾಸಿಯಾಗುತ್ತದೆಂಬ (panacea for many diseases) ಭಾವನೆ ಭಕ್ತರಲ್ಲಿದೆ. ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ (Khanapur, Bhalki) ಬಳಿಯ ಬೆಟ್ಟದಲ್ಲಿ ಸುಕ್ಷೇತ್ರ ಗಾಯಮುಖ ಗುಪ್ತಲಿಂಗೇಶ್ವರ ದೇವಾಲಯವಿದೆ. ಈ ದೇವಾಲಯ ಐದಾರು ಶತಮಾನದಷ್ಟು ಪುರಾತನವಾಗಿದ್ದು ಈ ಗುಪ್ತಲಿಂಗವಿರುವ ಬೆಟ್ಟ ಹಲವಾರು ವಿಸ್ಮಯಗಳನ್ನೊಳಗೊಂಡಿದೆ.

 

ಪಕ್ಕದ ಆಂಧ್ರ, ತೆಲಂಗಾಣ ಸೇರಿದಂತೆ ರಾಜ್ಯದ ನಾನಾ ಕಡೆಗಳಿಂದ ಇಲ್ಲಿಗೆ ಭಕ್ತರು ಬರುತ್ತಾರೆ. ಅಮಾವಾಸ್ಯೆ ಹಾಗೂ ಹುಣ್ಣಿಯಂದು ಭಾರೀ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಬಂದು ದೇವರ ದರ್ಶನ ಪಡೆದು ಹೋಗುತ್ತಾರೆ.

ಇಂತಹ ಗುಪ್ತಲಿಂಗ ದೇವಸ್ಥಾನದ ಸುತ್ತಮುತ್ತ ಬಹಳಷ್ಟು ಪ್ರಮಾಣದಲ್ಲಿ ಅರಣ್ಯ ಪ್ರದೇಶವಿದ್ದು ದೇವಸ್ಥಾನದಲ್ಲಿ ನೀರಿನ ಝರಿ ಇದುವರೆಗೂ ಬತ್ತಿರುವ ಉದಾಹರಣೆಯೇ ಇಲ್ಲ.

ಇಲ್ಲಿಗೆ ಬರುವ ಭಕ್ತರು ಈ ನೀರಿನಲ್ಲಿ ಸ್ನಾನ ಮಾಡುತ್ತಾರೆ. ಜೊತೆಗೆ ನೀರನ್ನ ಔಷಧಿ ರೂಪದಲ್ಲಿಯೂ ಪ್ರತಿನಿತ್ಯ ಕುಡಿಯುವುದರಿಂದ ನಮ್ಮ ದೇಹದಲ್ಲಿರುವ ಖಾಲಿಗಳು ವಾಸಿಯಾಗುತ್ತದೆ. ಜೊತೆಗೆ ಇಲ್ಲಿನ ನೀರು ಚರ್ಮರೋಗದ ನಿವಾರಣೆಗೆ ಈ ನೀರು ರಾಮಬಾಣದಂತೆ ಕೆಲಸ ಮಾಡುತ್ತದೆ. ಇಲ್ಲಿನ ನೀರನ್ನು ಕುಡಿದರೆ ಮತ್ತು ಸ್ನಾನ ಮಾಡಿದರೆ ರೋಗ ವಾಸಿಯಾಗುತ್ತದೆ ಎಂದು ಭಕ್ತರು ನಂಬಿದ್ದಾರೆ.

 

ಇಲ್ಲಿಗೆ ಬಂದು ಭಕ್ತಿಯಿಂದ ದೇವರಲ್ಲಿ ಪ್ರಾರ್ಥನೆ ಮಾಡಿದರೆ ಎಲ್ಲವೂ ಒಳ್ಳೆಯದೆ ಆಗುತ್ತದೆಂಬ ಭಾವನೆ ಇಲ್ಲಿನ ಭಕ್ತರಲ್ಲಿ ಮನೆ ಮಾಡಿದೆ.

ಗುಹೆಯಲ್ಲಿರುವ ಶಿವಲಿಂಗದ ಮೂಲಕವೂ ನೀರು ಹರಿದು ಬರುವುದು ಇಲ್ಲಿನ ವಿಶೇಷವಾಗಿದೆ. ಇಲ್ಲಿನ ನೀರಿನ ಝರಿ ದಿನದ 24 ಗಂಟೆಯೂ ನೀರು ಧುಮ್ಮಿಕ್ಕುತ್ತದೆ. ಇಲ್ಲಿ ಬೆಟ್ಟದ ಅಂಚಿನಿಂದ ಬರುವ ನೀರು ನಂದಿ ಬಾಯಿಯಿಂದ ಕಿರು ಕಲ್ಯಾಣಿಗೆ ಬಂದು ಬೀಳುತ್ತದೆ. ನೀರಿನ ಹರಿವು ಸದಾ ಒಂದೇ ಸಮನಾಗಿರುತ್ತದೆ. ಶುದ್ಧ ಕುಡಿಯುವ ನೀರಿನ ಘಟಕಗಳು ಇರದ ಕಾಲದಲ್ಲಿ ಹೆಚ್ಚಿನವರು ವಾಹನಗಳಲ್ಲಿ ಸುತ್ತಮುತ್ತಲಿನ ಗ್ರಾಮದ ಜನರು ಇಲ್ಲಿಗೆ ಬಂದು ನೀರು ತುಂಬಿಕೊಂಡು ಹೋಗುತ್ತಿದ್ದರು ಎಂದು ಇಂದಿನ ಕಾಲದ ಹಿರಿಯರು ಹೇಳುತ್ತಾರೆ.

ಆದರೀಗ ಮನೆ ಮನೆಗೆ ನೀರು ಬರುತ್ತಿರುವುದರಿಂದ ದೇವಸ್ಥಾನದಿಂದ ನೀರು ತೆಗೆದುಕೊಂಡು ಹೋಗುವುದು ಈಗ ನಿಂತಿದೆ. ದೇವಸ್ಥಾನಕ್ಕೆ ಬರುವವರು, ಇಲ್ಲಿಂದ ನೀರು ತೆಗೆದುಕೊಂಡು ಹೋಗುತ್ತಾರೆ. ಪ್ರಾಣಿ-ಪಕ್ಷಿಗಳ ನೀರಿನ ದಾಹ ಕೂಡ ಈ ಸ್ಥಳ ತಣಿಸುತ್ತಿದೆ. ಇನ್ನೂ ಬೆಸಿಗೆ, ಮಳೆಗಾಲ, ಚಳಿಗಾಲ ಯಾವುದೆ ಋತುವಿನಲ್ಲಿಯೂ ಇಲ್ಲಿಗೆ ಬಂದರೆ ಸಾಕು ಇಲ್ಲಿ ನೀರು ನಿರಂತರವಾಗಿ ಹರಯುತ್ತಲೇ ಇದೆ ಹೀಗಾಗಿ ಈ ದೇವಾಲಯ ಭಕ್ತರನ್ನ ಸೆಳೆಯುತ್ತಿದೆ


Spread the love

About Laxminews 24x7

Check Also

ದೀಪಾವಳಿ ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಸಾಧ್ಯತೆ

Spread the love ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ದೀಪಾವಳಿ ಹಬ್ಬದ ಬಳಿಕ ಮತ್ತು ನವೆಂಬರ್‌ 26ರ ಮುನ್ನ ನಡೆಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ