Breaking News

ಆನೇಕಲ್: ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ವ್ಯಕ್ತಿಗೆ ಚಾಕು ಇರಿದ ಸ್ನೇಹಿತರು

Spread the love

ಆನೇಕಲ್, ಫೆ.22: ಮದ್ಯದ ಪಾರ್ಟಿಯಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಇದೀಗ, ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ಬಳಿಯ ನಾರಾಯಣಪುರದಲ್ಲಿ ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ಯುವಕನಿಗೆ ಸ್ನೇಹಿತರೇಚಾಕು ಇರಿದಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆನೇಕಲ್: ಮದ್ಯಕ್ಕೆ ಮಿಕ್ಸ್ ಮಾಡಲು ನೀರು ಬೇಗ ಕೊಡದ ವ್ಯಕ್ತಿಗೆ ಚಾಕು ಇರಿದ ಸ್ನೇಹಿತರು

ನಾರಾಯಣಪುರ ನಿವಾಸಿ ಮುರುಗೇಶ್ (42) ಇರಿತಕ್ಕೊಳಗಾದ ವ್ಯಕ್ತಿ. ಇದೇ ಊರಿನ ನಿವಾಸಿಗಳಾದ ಸತೀಶ್ ಮತ್ತು ನವೀನ್ ಎಂಬುವವರು ಚಾಕು ಇರಿದ ಆರೋಪಿಗಳಾಗಿದ್ದಾರೆ. ನಾರಾಯಣಪುರ ಸಮೀಪದ ಗುಲ್ಲಣ್ಣ ಲೇವೇಟ್ ಬಡಾವಣೆಯೊಂದರಲ್ಲಿ ಆರೋಪಿಗಳು ರಾತ್ರಿ ವೇಳೆ ಎಣ್ಣೆ ಪಾರ್ಟಿ ನಡೆಸುತ್ತಿದ್ದರು.

 

ರಾತ್ರಿ 12:30ರ ಸುಮಾರಿಗೆ ನೀರಿಗಾಗಿ ಮುರುಗೇಶ್ ಮನೆ ಬಾಗಿಲು ತಟ್ಟಿದ್ದಾರೆ. ಆದರೆ ನೀರು ಬೇಗ ಕೊಡಲಿಲ್ಲ ಎಂಬ ಕಾರಣಕ್ಕೆ ಆರೋಪಿಗಳು ಚಾಕುವಿನಿಂದ ತಲೆ, ಮುಖದ ಭಾಗಕ್ಕೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗಾಯಾಳುವಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನಗರದ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ