ಮೈಸೂರು, ಫೆ.22: ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತೇನೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ (Srinivasa Prasad) ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ಹೋಗುವುದಿಲ್ಲ. ಆದರೆ ಬಿಜೆಪಿಯನ್ನು ಬೆಂಬಲಿಸಿ ಎಂದು ಎಲ್ಲರನ್ನು ಕೇಳಿಕೊಳ್ಳುತ್ತೇನೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಸಿದ್ದರಾಮಯ್ಯ (Siddaramaiah)ಬಾವಿಯೊಳಗಿನ ಕಪ್ಪೆ ಇದ್ದಂತೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಸಮುದ್ರದಲ್ಲಿ ಈಜಿರುವ ನಾಯಕ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಪ್ರಧಾನಿ ಮೋದಿಗೆ ಹೋಲಿಸಬೇಡಿ ಎಂದರು.
ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತಾಡುವುದನ್ನು ಕಲಿತಿದ್ದಾನೆ. ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ಗೆ ಏನು ವ್ಯತ್ಯಾಸ ಇದೆ ಹೇಳಿ? ಇಬ್ಬರು ಕೂಡಾ ಸುಮ್ಮನೆ ಕೂಗಾಡುತ್ತಾರೆ ಎಂದರು. ಅಲ್ಲದೆ, ಶೀಘ್ರದಲ್ಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದರು.