Breaking News

ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ..! ಇಲ್ಲಿದೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ

Spread the love

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ(Morarji desai school) 6 ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಅಂಕಣದಲ್ಲಿ ತಿಳಿಸಿರುವ ಸಂಪೂರ್ಣವಾಗಿ ಓದಿ ಆನ್ಲೈನ್ ಮೂಲಕ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು.

 

ಈ ಶಾಲೆಗಳಲ್ಲಿ ಓದಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಆಯ್ಕೆ ವಿಧಾನ ಹೇಗಿರುತ್ತದೆ? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

5 ನೇ ತರಗತಿ ಪಾಸಾದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ (OBC) ಶೇ.25 ಸೀಟು ಲಭ್ಯವಿದ್ದು ಈ ವರ್ಗದ ವಿದ್ಯಾರ್ಥಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಮಾರ್ಚ್ 2024

ಈ ಶಾಲೆಗಳಲ್ಲಿ ಯಾವೆಲ್ಲ ಸೌಲಭ್ಯ ಸಿಗುತ್ತದೆ?

ಈ ವಸತಿ ಶಾಲೆಗಳಲ್ಲಿ ಉಚಿತ ಊಟ, ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರಗಳೊಂದಿಗೆ ಇನ್ನಿತರೇ ಮೂಲಭೂತ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ.

ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್:

ಪ್ರವೇಶ ಬಯಸುವ ಅಲ್ಪಸಂಖ್ಯಾತರ ಮತ್ತು ಇತರೇ ಪ್ರವರ್ಗಗಳ ಆಸಕ್ತ ವಿದ್ಯಾರ್ಥಿಗಳು ಸಂಬಂಧಿಸಿದ ಸೇವಾಸಿಂಧು ಪೋರ್ಟಲ್ ವೈಬ್‍ಸೈಟ್ ಲಿಂಕ್ https://sevasindhuservices.karnataka.gov.in ಮೂಲಕ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಿಬಹುದು ಉಚಿತ ಸೇವೆ ಪಡೆಯಲು ಸಮೀಪದ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅಥವಾ ನಿಮಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಗೊತ್ತಾಗದೇ ಇದ್ದಲ್ಲಿ ನಿಮ್ಮ ಹತ್ತಿರದ ಕಂಪ್ಯೂಟರ್ ಸೆಂಟರ್ ಅಥವಾ ಗ್ರಾಮ ಒನ್/ ಕರ್ನಾಟಕ ಒನ್ ಸೆಂಟರ್ ಗಳನ್ನು ಅಗತ್ಯ ದಾಖಲಾತಿಗಳ ಸಮೇತ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಹಾಕಲು ಬೇಕಾಗುವ ಅಗತ್ಯ ದಾಖಲಾತಿಗಳು:

1) ವಿದ್ಯಾರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ

2) ಇತ್ತೀಚಿನ ಭಾವಚಿತ್ರ

3) ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು.

4) ಆಧಾರ್ ಕಾರ್ಡ ವಿವರ.

ಆಯ್ಕೆ ವಿಧಾನದ ಮಾಹಿತಿ:

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ ನಂತರ ಹೆಚ್ಚು ಅಂಕ ಪಡೆದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಬಳಿಕ ಆನ್‌ಲೈನ್ ಕೌನ್ಸಿಲಿಂಗ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಿ ವಸತಿ ಶಾಲೆಯಲ್ಲಿ 6 ನೇ ತರಗತಿ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ