ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ಇನ್ನೂ ಅಂತಿಮವಾಗಿಲ್ಲ, ಸೀಟು ಹಂಚಿಕೆ ಸರಿಯಾಗಿಯೇ ಆಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ.

ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ, ಮಂಡ್ಯ ಸಂಸದೆ ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ ಎಂದರು.
Laxmi News 24×7