Breaking News

ಬಿಜೆಪಿಯಿಂದ ಸಂವಿಧಾನಕ್ಕೆ ಧಕ್ಕೆ ಬಂದಿದೆ ಎಂದ ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು, ಫೆಬ್ರವರಿ 25: ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಏನು ಆತಂಕ ಬಂದಿದೆ ಎಂಬುವುದನ್ನು ಜನರಿಗೆ ತಿಳಿಸುವ ಕೆಲಸ ಮಾಡಿದ್ದೇವೆ. ಬಿಜೆಪಿಯಿಂದ ಸಂವಿಧಾನಕ್ಕೆ ಧಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ(Siddaramaiah)ವಾಗ್ದಾಳಿ ಮಾಡಿದ್ದಾರೆ. ಸಂವಿಧಾನ ಜಾರಿಯಾಗಿ 75ನೇ ವರ್ಷ ಹಿನ್ನೆಲೆಯಲ್ಲಿ ಸಮಾಜಕಲ್ಯಾಣ ಇಲಾಖೆಯಿಂದ ನಗರದ ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಭಾಗಿ ಮಾತನಾಡಿದ ಅವರು, ಮೋದಿ ಸರ್ಕಾರದಿಂದ ಬಂದಿರುವ ಆತಂಕವನ್ನು ಜನರಿಗೆ ತಿಳಿಸಿದ್ದೇವೆ. ಡಾ.ಬಿ.ಅರ್.ಅಂಬೇಡ್ಕರ್​ ನಮ್ಮ ದೇಶಕ್ಕೆ ಸಂವಿಧಾನವನ್ನು ಕೊಟ್ಟಿದ್ದಾರೆ. ಸಂವಿಧಾನ ಜಾರಿಯಾದ ದಿನದಿಂದ ಆಂತರಿಕವಾಗಿ ಬಿಜೆಪಿ ವಿರೋಧಿಸುತ್ತಿದೆ ಎಂದು ಕಿಡಿಕಾರಿದಾರೆ.

ಸಂವಿಧಾನವನ್ನು ಬಿಜೆಪಿ, ಆರ್​ಎಸ್​ಎಸ್​ ಗೌರವಿಸುವುದಿಲ್ಲ

ಸಂವಿಧಾನವನ್ನು ಬಿಜೆಪಿ, ಆರ್​ಎಸ್​ಎಸ್​ ಗೌರವಿಸುವುದಿಲ್ಲ. ಮಹಿಳೆಯರು, ಕಾರ್ಮಿಕರು, ಹಿಂದುಳಿದವರ ವಿರುದ್ಧ ಬಿಜೆಪಿ ಪಕ್ಷ ಇರುವುದು. ನರೇಂದ್ರ ಮೋದಿ ಸಂಪುಟದಲ್ಲಿ ಅನಂತಕುಮಾರ್​ ಹೆಗಡೆ ಮಂತ್ರಿಯಾಗಿದ್ದರು. ಹೆಗಡೆ ಅಧಿಕಾರಕ್ಕೆ ಬಂದಿದ್ದೇ ಸಂವಿಧಾನ ಬದಲಿಸಲು ಎಂದು ಹೇಳಿದ್ದರು. ಅನಂತಕುಮಾರ್​ ಹೆಗಡೆ ವಿರುದ್ಧ ಮೋದಿ, ಅಮಿತ್ ಶಾ ಕ್ರಮ ಕೈಗೊಳ್ಳಲಿಲ್ಲ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ