Breaking News

ವಸತಿ ಶಾಲೆಯಲ್ಲಿ ಬೆಂಕಿ ಅವಘಡ:

Spread the love

ಮುದ್ದೇಬಿಹಾಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರಗೊಂಡು ಹಲವರಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮವೊಂದರಲ್ಲಿ ನಡೆದಿದೆ.

 

ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿಗೆ ಮೂಗು, ಕೆನ್ನೆ, ಕಿವಿಗೆ ಝಳ ತಾಕಿದ್ದು, ಪ್ರಾಥಮಿಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾನೆ.

Muddebihal: ವಸತಿ ಶಾಲೆಯಲ್ಲಿ ಬೆಂಕಿ ಅವಘಡ: ಓರ್ವನ ಸ್ಥಿತಿ ಗಂಭೀರ

ಘಟನೆ ನಡೆದ ಕೊಠಡಿಯಲ್ಲಿ 16 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ ಈ ಅವಘಡ ಸಂಭವಿಸಿದೆ. ವಾರ್ಡನ್ ಮತ್ತು 10 ನೇ ತರಗತಿ ವಿದ್ಯಾರ್ಥಿಗಳು ಧಾವಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

ಶಾಲೆಗೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ವರದಿ ಸಲ್ಲಿಸಿದ್ದಾರೆ.

ಶಾಲೆ ಉದ್ಘಾಟನೆಗೊಂಡ ಆರು ತಿಂಗಳಲ್ಲಿಯೇ ಇದು ಎರಡನೇ ಘಟನೆ ಎನ್ನಲಾಗಿದೆ. ಅಗ್ನಿ ಅವಘಡ ಸಂಭವಿಸಿದ್ದರೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಿಳಿಸದೆ ಮುಚ್ಚಿ ಹಾಕುವ ಪ್ರಯತ್ನಗಳು ನಡೆದಿದ್ದವು ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ