Breaking News

ಕಾಣೆಯಾಗಿದ್ದ ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ

Spread the love

ಸುರತ್ಕಲ್:‌ ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಮುಲ್ಕಿ ಸಮೀಪ ಹಳೆಯಂಗಡಿ ಡ್ಯಾಂ ಬಳಿ ಫೆ. 27ರ ಮಂಗಳವಾರ ತಡರಾತ್ರಿ ಪತ್ತೆಯಾಗಿದೆ.

ಈಜಲು ಹೋಗಿದ್ದ ವೇಳೆ ವಿದ್ಯಾರ್ಥಿಗಳು ಮುಳುಗಿರುವ ಶಂಕೆ ವ್ಯಕ್ತವಾಗಿದೆ.

ಮೃತ ದೇಹಗಳನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.

 

ಘಟನೆಯ ವಿವರ: ಖಾಸಗಿ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ಶಾಲೆಯಿಂದ ಹೊರಗೆ ತೆರಳಿದ್ದು, ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದರು.

ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿ‌ತ್‌ ಚಂದ್ರಕಾಂತ್‌, ನಿರುಪ್‌,ಅನ್ವಿತ್‌ ಹಾಗೂ ರಾಘವೇಂದ್ರ ಅವರು ಪ್ರಿಪರೇಟರಿ ಪರೀಕ್ಷೆ ಮುಗಿಸಿ ತೆರಳಿದ್ದವರು ನಾಪತ್ತೆಯಾಗಿದ್ದರು


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ