Breaking News

ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ: ಸಿಪಿಐ ರವೀಂದ್ರ

Spread the love

ಥಣಿ: ‘ಪೊಲೀಸ್ ಇಲಾಖೆಯಿಂದ ನಿರಂತರವಾಗಿ ಜಾಗೃತಿ ಮೂಡಿಸಿದರೂ, ಹಲವು ಚಾಲಕರು ಮತ್ತು ಸವಾರರು ಸಂಚಾರ ನಿಯಮ ಪಾಲಿಸದ್ದರಿಂದ ಅಪಘಾತ ಹೆಚ್ಚುತ್ತಿವೆ. ಮುಂದಿನ ದಿನಗಳಲ್ಲಿ ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಪಿಐ ರವೀಂದ್ರ ನಾಯ್ಕೋಡಿ ಎಚ್ಚರಿಕೆ ನೀಡಿದರು.

ಸಂಚಾರ ನಿಯಮ ಪಾಲಿಸದವರ ವಿರುದ್ಧ ಕ್ರಮ: ಸಿಪಿಐ ರವೀಂದ್ರ

ಇಲ್ಲಿನ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ನಡೆದ ಆಟೋರಿಕ್ಷಾ ಹಾಗೂ ಖಾಸಗಿ ವಾಹನಗಳ ಚಾಲಕರ ಸಭೆಯಲ್ಲಿ ಮಾತನಾಡಿದ ಅವರು, ‘ಕಳೆದೊಂದು ವಾರದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಅಪಘಾತಗಳಲ್ಲಿ 25ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇಂಥ ಪ್ರಕರಣಗಳಲ್ಲಿ ಪರವಾನಗಿ ಹೊಂದಿರದ ಚಾಲಕರೇ ಹೆಚ್ಚಿರುವುದು ಕಂಡುಬಂದಿದೆ. ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು’ ಎಂದು ತಿಳಿಸಿದರು.

‘ಅಥಣಿಯ ಪ್ರಮುಖ ರಸ್ತೆಗಳಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸಬಾರದು. ವ್ಯವಸ್ಥಿತವಾಗಿ ಪಾರ್ಕಿಂಗ್ ಮಾಡದ ವಾಹನಗಳ ಮಾಲೀಕರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಸಿದರು.

ಪಿಎಸ್‌ಐ ಶಿವಾನಂದ ಕಾರಜೋಳ, ಹೆಚ್ಚುವರಿ ಎಸ್‌ಐ ಎಸ್.ಸಾಗನೂರ ಇದ್ದರು.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ