Breaking News

ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ, ಬಿಜೆಪಿ ಕೆರಳುವುದು ಖಚಿತ!

Spread the love

ಬೆಂಗಳೂರು: ವಿದ್ಯಾರ್ಥಿಗಳಿಗೆ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.

ಭೋಸರಾಜು ಬುಧವಾರ ಹೇಳಿದ್ದಾರೆ.

ಜವಹರಲಾಲ್ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ ಹಾಗೂ ಕಲ್ಪನೆ ಬೆಳೆಸುವುದು ಈ ಲ್ಯಾಬ್ ನ ಉದ್ದೇಶ. ವಿದ್ಯಾರ್ಥಿಗಳ ಕಲಿಕೆ ಇನ್ನಷ್ಟು ಪರಿಣಾಮಕಾರಿಯಾಗಿರಲು ಮತ್ತೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಯೋಗಿಕವಾಗಿ ಚರ್ಚಿಸಲು, ಸಂಶೋಧಿಸಲು ಹಾಗೂ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇದು ಪ್ರೇರೇಪಿಸಲಿದೆ. 21ನೇ ಶತಮಾನದ ಕೌಶಲ್ಯಗಳ ಕಲಿಕೆಗೆ ಅನುವು ಮಾಡಿಕೊಡುವ ಪಠ್ಯಕ್ರಮವನ್ನು ಇದರಲ್ಲಿ ಅಳವಡಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.ನೆಹರು ಸ್ಟ್ರೀಮ್ ಲ್ಯಾಬ್ಸ್ ಪ್ರಾಯೋಗಿಕ ಅನುಭವವನ್ನು ಮತ್ತು ವಿವಿಧ ಕೌಶಲ್ಯಗಳಲ್ಲಿ ಪ್ರಾವೀಣ್ಯತೆ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುತ್ತದೆ. ವಿಜ್ಞಾನ, ತಂತ್ರಜ್ಞಾನ, ರೊಬೊಟಿಕ್ಸ್, ಪರಿಸರ ಮತ್ತು ಪರಿಸರ ವಿಜ್ಞಾನ, ಖಗೋಳಶಾಸ್ತ್ರ ಮತ್ತು ಗಣಿತ ವಿಷಯಗಳ ಅಂತರಶಿಸ್ತೀಯ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ಉಪಕರಣಗಳು ಮತ್ತು ಸಲಕರಣೆಗಳೊಂದಿಗೆ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಸ್ವಚ್ಛತಾ ರಾಯಭಾರಿಯಾಗಿ ದೇಶದ ಗಮನ ಸೆಳೆದಿದ್ದ ಪೆರುವಾಯಿ ಗ್ರಾಪಂ ಅಧ್ಯಕ್ಷೆ ನೆಫೀಸಾ ಲೋಕಾಯುಕ್ತ ಬಲೆಗೆ

Spread the loveಬಂಟ್ವಾಳ: ಕಸ ಸಂಗ್ರಹಣಾ ವಾಹನವನ್ನು ತಾವೇ ಚಲಾಯಿಸುವ ಮೂಲಕ ಗಮನ ಸೆಳೆದು, ಕಳೆದ ವರ್ಷ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ