Breaking News

ಜಾತಿ ಗಣತಿ ವರದಿಗೆ ಬಾರಿ ಅಪಸ್ವರ: ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಕೆಲ ನಾಯಕರು ಅಸಮಾಧಾನ

Spread the love

ಬೆಂಗಳೂರು, ಫೆಬ್ರವರಿ 29: ತೀವ್ರ ವಿರೋಧದ ನಡುವೆಯೂ ಜಾತಿಗಣತಿ ವರದಿ(Caste Census Report)ಇಂದು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿ ಸಲ್ಲಿಸಿದ್ದಾರೆ. ಇತ್ತ ಜಾತಿ ಗಣತಿ ವರದಿ ಸಲ್ಲಿಕೆ ಆಗುತ್ತಿದ್ದಂತೆ ಭಾರಿ ಅಪಸ್ವರ ಕೇಳಿಬಂದಿದ್ದು, ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಶಾಸಕ ವಿನಯ್ ಕುಲಕರ್ಣಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸೇರಿದಂತೆ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಈ ಬಗ್ಗೆ ಮತ್ತೆ ಕಿಡಿಕಾರಿದ್ದಾರೆ.

ಜಾತಿ ಗಣತಿ ವರದಿಗೆ ಬಾರಿ ಅಪಸ್ವರ: ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಕೆಲ ನಾಯಕರು ಅಸಮಾಧಾನ

ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ. ಮನೆ ಮನೆಗೆ ಭೇಟಿ ನೀಡದೆ ಅವೈಜ್ಞಾನಿಕವಾಗಿ ತಯಾರಿಸಲಾದ ವರದಿಯನ್ನು ಸಮಾಜ ಒಪ್ಪುವುದಿಲ್ಲ. ಜಾತಿ ಗಣತಿ ವರದಿ ವಿರೋಧಿಸಿ ಈಗಾಗಲೇ ಎರಡು ಬಾರಿ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

 


Spread the love

About Laxminews 24x7

Check Also

ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ, ರಕ್ಷಣೆಗೆ ಹೋದ ನಾಲ್ವರು ಸೇರಿ ಐವರು ಮಕ್ಕಳು ನೀರುಪಾಲು

Spread the loveಮಂಡ್ಯ: ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಮುಂದಾಗಿ, ಐವರು ಮಕ್ಕಳು ನೀರುಪಾಲಾದ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ