Breaking News

ರಾಜ್ಯದಲ್ಲಿ ಶುರುವಾಯ್ತು ಸನ್‌ ಸ್ಟ್ರೋಕ್‌ಬೆಳಗಾವಿ: 34 ಡಿ.ಸೆ – 19 ಡಿ.ಸೆ

Spread the love

ಬೆಂಗಳೂರು: ಈ ವರ್ಷ ಬಿಸಿಲು ಹೆಚ್ಚಾಗುವ ಎಲ್ಲ ಲಕ್ಷಣಗಳು ಗೋಚರವಾಗುತ್ತಿದೆ. ಚಳಿಗಾಲದಲ್ಲೇ ಬೇಸಿಗೆಯಂತಹ ವಾತಾವರಣ ಜನರಿಗೆ (Dry weather) ಕಾಡಿತ್ತು. ಇದೀಗ ಬೇಸಿಗೆ ಆರಂಭದಲ್ಲೇ ಬಿಸಿಲ ಧಗೆ ಹೆಚ್ಚಾಗುತ್ತಿದೆ. ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

 

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ತಾಪಮಾನ ಏರಿಕೆ ಆಗಲಿದೆ. ಉತ್ತರ ಒಳನಾಡದಲ್ಲಿ ಗರಿಷ್ಠ ಉಷ್ಣಾಂಶ ದುಪ್ಪಟ್ಟಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಏರಿಕೆ ಆಗಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಕಾಶವು ನಿರ್ಮಲವಾಗಿರಲಿದೆ. ಬೆಳಗಿನ ಜಾವವು ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 18 ಡಿ.ಸೆ ಇರಲಿದೆ.


Spread the love

About Laxminews 24x7

Check Also

ಡಿಕೆಶಿ-ಸಿದ್ದರಾಮಯ್ಯ ಬಣಗಳ ಮುಖಂಡರ ನಡುವೆ ಪರಸ್ಪರ ವಾಕ್ಸಮರ

Spread the loveತುಮಕೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಡಿಕೆಶಿ ಬಣ vs ಸಿದ್ದರಾಮಯ್ಯ ಬಣಗಳ ನಡುವಿನ ಜಟಾಪಟಿ ಜೋರಾಗಿದ್ದು, ಭಾರೀ ಚರ್ಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ