ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್ ಸ್ಫೋಟ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್ ಪಡೆಯುತ್ತಿದ್ದು, ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.
ರಾಂಏಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ದಾರಿ ಮಧ್ಯೆ ಬಟ್ಟೆ ಬದಲಿಸಿ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಶರ್ಟ್ ಮೇಲೆ ಶರ್ಟ್, ಪ್ಯಾಂಟ್ ಮೇಲೆ ಪ್ಯಾಂಟ್ ಹಾಕಿಕೊಂಡು ತೆರಳಿರುವ ಬಗ್ಗೆ ತಿಳಿದು ಬಂದಿದೆ.