ನಟ ಶರಣ್ (Sharan) ಅವರು ಸ್ಯಾಂಡಲ್ವುಡ್ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಅವರ ನಟನೆಯ ‘ಅವಾತರ ಪುರುಷ 2’ ಸಿನಿಮಾ ಮಾರ್ಚ್ 22ರಂದು ರಿಲೀಸ್ ಆಗಲಿದೆ ಎಂದು ಘೋಷಣೆ ಆಗಿದೆ. ಈ ಚಿತ್ರದಲ್ಲಿ ಮಾಟ ಮಂತ್ರದ ಬಗ್ಗೆ ಇದೆ. ಅದೇ ರೀತಿ, ಹಾರರ್ ಕಥೆ ಹೊಂದಿರುವ ‘ಛೂ ಮಂತರ್’ ಸಿನಿಮಾ ಕೂಡ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ರಿಲೀಸ್ ದಿನಾಂಕವನ್ನು ತಂಡ ತಿಳಿಸಿದೆ. ಏಪ್ರಿಲ್ 5ಕ್ಕೆ ಈ ಚಿತ್ರ ಬಿಡುಗಡೆ ಆಗಲಿದೆ. ಈ ಮೂಲಕಶರಣ್ಸಿನಿಮಾ ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗುತ್ತಿದೆ.

ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ‘ಛೂ ಮಂತರ್’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ‘ಕರ್ವ’ ಹೆಸರಿನ ಹಾಹರ್ ಸಿನಿಮಾ ಮಾಡಿ ಫೇಮಸ್ ಆದವರು ನವನೀತ್. ಅವರು ಶರಣ್ ಚಿತ್ರಕ್ಕೆ ಆಯಕ್ಷನ್ ಕಟ್ ಹೇಳಿದ್ದಾರೆ. ಹಾಸ್ಯ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಂಡು ಫೇಮಸ್ ಆಗಿರೋ ಶರಣ್ ಅವರು ಹೊಸ ರೀತಿಯ ಪ್ರಯೋಗಕ್ಕೆ ಮುಂದಾಗಿದ್ದಾರೆ. ಈಗಾಗಲೇ ಸಿನಿಮಾದ ಟೀಸರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.
‘ಛೂ ಮಂತರ್’ ಸಿನಿಮಾ ರಿಲೀಸ್ಗೆ ಒಂದು ತಿಂಗಳು ಬಾಕಿ ಇದೆ. ಹೀಗಾಗಿ, ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡುವ ಕೆಲಸವನ್ನು ತಂಡ ಮಾಡುತ್ತಿದೆ. ಟೀಸರ್ ನೋಡಿದವರಿಗೆ ಸಿನಿಮಾದ ಗುಣಮಟ್ಟದ ಬಗ್ಗೆ ನಿರೀಕ್ಷೆ ಮೂಡುವಂತಾಗಿದೆ. ಶೀಘ್ರವೇ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ.
Laxmi News 24×7