Breaking News

ಪಾಕ್ ಪರ ಘೋಷಣೆ: ಬಂಧಿತ ಆರೋಪಿಗಳನ್ನು ಕರೆತಂದು ಪೊಲೀಸರಿಂದ ವಿಧಾನಸೌಧದಲ್ಲಿ ಇಂದು ಸ್ಥಳ ಮಹಜರು

Spread the love

ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಂಧಿತ ಮೂವರು ಆರೋಪಿಗಳನ್ನು ಎರಡು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪೊಲೀಸರು ಆರೋಪಿಗಳಾದ ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು.

ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ