Breaking News

ಮೇ 31 ರೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸಿ, ಇಲ್ಲದಿದ್ರೆ ದಂಡ ಫಿಕ್ಸ್..!

Spread the love

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅಳವಡಿಸಲು ಅವಧಿ ವಿಸ್ತರಣೆ ಮಾಡಲಾಗಿದ್ದು ಮೇ.31 ಕೊನೆಯ ದಿನಾಂಕವಾಗಿದೆ. ಮೇ.31 ರೊಳಗೆ HSRP’ ನಂಬರ್ ಪ್ಲೇಟ್ ಅಳವಡಿಸದಿದ್ರೆ ದಂಡ ಬೀಳುವುದಂತು ಗ್ಯಾರಂಟಿ.

ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

 

ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ನಂತರ ಮೇ.31 ಕೊನೆಯ ದಿನಾಂಕ ನಿಗದಿಪಡಿಸಲಾಗಿದೆ.

ಹೆಚ್‌ಎಸ್‌ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡಲು ಆನ್ಲೈನ್ ಮೂಲಕ ನೋಂದಣಿ ಮಾಡಿಸಬೇಕಾಗಿದ್ದು, ಈ ಸಮಯದಲ್ಲಿ ತಾಂತ್ರಿಕ ತೊಂದರೆಗಳು ಉಂಟಾದರೆ ಅದನ್ನು ಬಗೆಹರಿಸಲು ಸಹಾಯವಾಣಿಯನ್ನು ಸಾರಿಗೆ ಇಲಾಖೆ ಆರಂಭಿಸಿದೆ. ವಾಹನ ಮಾಲೀಕರು ಬೆಳಗ್ಗೆ 10 ರಿಂದ ಸಂಜೆ 5.30ರ ತನಕ ಸಹಾಯವಾಣಿ ಸಂಖ್ಯೆ 9449863429/26 ಸಂಖ್ಯೆಗೆ ಕರೆ ಮಾಡಬಹುದು. ವೆಬ್ ಸೈಟ್ https://transport.karnataka.gov.in?utm_source=DH-MoreFromPub&utm_medium=DH-app&utm_campaign=DH ಅಥವ www.siam.in ಗೆ ಭೇಟಿ ನೀಡಿ ವಾಹನಗಳಿಗೆ ಹೆಚ್‌ಎಸ್‌ಆರ್ಪಿ ನಂಬರ್ ಪ್ಲೇಟ್ ನೋಂದಣಿ ಮಾಡಿಕೊಳ್ಳಬಹುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ