Home / ರಾಜಕೀಯ / ಕರ್ನಾಟಕದಲ್ಲಿ ಹೆದ್ದಾರಿ ಯೋಜನೆಗೆ ಕೇಂದ್ರದಿಂದ 2,675 ಕೋಟಿ ರೂ. ಮಂಜೂರು

ಕರ್ನಾಟಕದಲ್ಲಿ ಹೆದ್ದಾರಿ ಯೋಜನೆಗೆ ಕೇಂದ್ರದಿಂದ 2,675 ಕೋಟಿ ರೂ. ಮಂಜೂರು

Spread the love

ನವದೆಹಲಿ ಮಾರ್ಚ್​ 07: ಪಣಜಿ-ಹೈದರಾಬಾದ್ (Panaji-Hydarabad)​ EC10 ಕಾರಿಡಾರ್​​ ಅಡಿಯಲ್ಲಿ ಬಾಗಲಕೋಟೆ (Bagalkote) ಮತ್ತು ಬೆಳಗಾವಿ (Belagavi) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-748ಎ ಬೆಳಗಾವಿ-ಹುನಗುಂದ-ರಾಯಚೂರು ವಿಭಾಗದ 92.40 ಕಿಮೀ ಉದ್ದದ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಉನ್ನತೀಕರಿಸಲು ರಾಷ್ಟ್ರೀಯ ಹೆದ್ದಾರಿ ಸಚಿವಾಲಯ 2,675 ಕೋಟಿ ರೂ. ಮಂಜೂರು ಮಾಡಿದೆ. ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಯಲ್ಲಿ ಹೆದ್ದಾರಿ ಉನ್ನತೀಕರಿಸಲಾಗುತ್ತದೆ.

ಈ ಯೋಜನೆಯು ಪಣಜಿ-ಹೈದರಾಬಾದ್​ ಆರ್ಥಿಕ ಕಾರಿಡಾರ್​ನ ಅವಿಭಾಜ್ಯ ಅಂಗವಾಗಿದೆ. EC10 ಯೋಜನೆಯು ಪಣಜಿ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಗಳನ್ನು ಸಂಪರ್ಕಿಸುತ್ತದೆ. ಈ EC10 ಮೀನುಗಾರಿಗೆ ಮತ್ತು ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿರುವ ಪಣಜಿ, ಆಹಾರ ಧ್ಯಾನಗಳು ಮತ್ತು ಹಾಲಿನ ಉತ್ಪನ್ನಗಳಿಗೆ ಹೆಸರುವಾಸಿಯಾಗಿರುವ ಬೆಳಗಾವಿ, ಅಕ್ಕಿ, ಹತ್ತಿ, ಶೇಂಗಾ ಮತ್ತು ಬೇಳೆಕಾಳುಗಳಿಗೆ ಹೆಸರುವಾಸಿಯಾಗಿರುವ ರಾಯಚೂರು ಮತ್ತು ಐಟಿ, ಫಾರ್ಮ್​ ಮತ್ತು ಹೆಲ್ತಕೇರ್​ಗೆ ವಿಶಿಷ್ಟ ಸ್ಥಾನ ಪಡೆದಿರುವ ಹೈದರಾಬಾದ್​ ಸೇರಿದಂತೆ ಪ್ರಮುಖ ಕೈಗಾರಿಕಾ ಕೇಂದ್ರಳನ್ನು ಸಂಪರ್ಕಿಸುತ್ತದೆ.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ