Breaking News

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ

Spread the love

ಕೊಪ್ಪಳ,: ಅಂತರ್ಜಾತಿ ವಿವಾಹವಾಗಿದ್ದಕ್ಕೆ (Inter Caste Marriage) ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದ (Koppal) ಭಾಗ್ಯ ನಗರದಲ್ಲಿ (Bhagya Nagar) ನಡೆದಿರುವುದು ಗೊತ್ತಾಗಿದೆ. ಶಂಕ್ರಪ್ಪ ಬೇನಳ್ಳಿ ಎಂಬವರ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಡಲಾಗಿತ್ತು ಎಂಬ ಆರೋಪ ಈಗ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ, ದೂರು ನೀಡಿದರೂ ಕ್ಯಾರೇ ಅನ್ನದ ಪೊಲೀಸರು

ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ ಸಮಾಜದ ಯುವತಿಯನ್ನು ಮದುವೆಯಾಗಿದ್ದರು. ಹೀಗಾಗಿ ವಾಲ್ಮೀಕಿ ಸಮಾಜದ ನಾಯಕರು ಶೆಂಕ್ರಪ್ಪ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದರು.

ಸಮಾಜದ ಯಾವುದೇ ಸಭೆ ಸಮಾರಂಭಗಳಿಗೆ ನಮಗೆ ಆಹ್ವಾನವಿಲ್ಲ. ಸಮಾಜದ ಬೇರೆ ಕುಟುಂಬದವರ ಕಾರ್ಯಕ್ರಮಕ್ಕೆ ಕೂಡಾ ಆಹ್ವಾನ ಇಲ್ಲ. ದಂಡ ಪಾವತಿ ಮಾಡುವ ವರಗೆ ಸಮಾಜದ ಯಾವುದೇ ಕಾರ್ಯಕ್ರಮಕ್ಕೆ ಕರೆಯಬಾರು ಎಂದು ಸಮಾಜದ ಮುಖಂಡರಿಂದ ಆದೇಶವಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಕೋರ್ಟ್​​ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆರೋಪಿ ಸಾವು

Spread the loveಬೆಂಗಳೂರು, ಅಕ್ಟೋಬರ್​ 09: ವಿಚಾರಣೆಗೆ ಕರೆತಂದಿದ್ದ ವೇಳೆ ನ್ಯಾಯಾಲಯದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ