ಧಾರವಾಡ, ಮಾ.07: ಜಿಲ್ಲೆಯ ಕಲಘಟಗಿ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಶಿರಸ್ತೇದಾರ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ.
ಭೂ ನ್ಯಾಯ ಮಂಡಳಿ ಆದೇಶದಂತೆ ಖಾತೆ ಬದಲಿಸಿಕೊಡಲು ರೈತ ಮಲ್ಲಿಕಾರ್ಜುನ ಕುರುಬರ ಎಂಬಾತನ ಬಳಿ 45 ಸಾವಿರ ರೂ. ಲಂಚ ಪಡೆಯುವಾಗ ಕಲಘಟಗಿ ತಹಶೀಲ್ದಾರ್ ಕಚೇರಿ ಶಿರಸ್ತೆದಾರ ಸುರೇಶ್ ಅಡವಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ. ಕೂಡಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.