Breaking News

ಮೊಬೈಲ್ ನಂಬರ್ ಕೊಡಲು ನಿರಾಕರಿಸಿದಕ್ಕೆ ಯುವಕರಿಂದ ಯುವತಿ ಮೇಲೆ ಹಲ್ಲೆ;

Spread the love

ಬಾಗಲಕೋಟೆ, ಮಾರ್ಚ್​.08: ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು (Student) ಚುಡಾಯಿಸಿ, ಹಲ್ಲೆ ಮಾಡಿದ್ದು ಹಲ್ಲೆಗೊಳಗಾದ (Assault) ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ರಬಕವಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿನಿ (ಸ್ವಾತಿ ನಡಕಟ್ಟಿ) ಆಸ್ಪತ್ರೆಗೆ ದಾಖಲಾಗಿದ್ದಾಳೆ. ಬುಧವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಅನ್ವರ್ ಮಕಾಂದಾರ್, ಆಯನ್ ಪಟೇಲ್, ಜಾವೀದ್ ಅಲಿಹ್ಮದ್ ಎಂಬ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆಗೊಳಗಾದ ಯುವತಿ ಸ್ವಾತಿ ತನ್ನ ಸ್ನೇಹಿತೆಯರಾದ ಸಾಕ್ಷಿ, ಕವಿತಾ ಜೊತೆ ಕಾಲೇಜಿಗೆ ತೆರಳಲು ಬಸ್​ಗಾಗಿ ಕಾಯುತ್ತಿದ್ದಳು. ಈ ವೇಳೆ ಬಂದ ಯುವಕರು ಯುವತಿಯನ್ನು ಚುಡಾಯಿಸಿದ್ದಾರೆ. ಹಾಗೂ ಹಲ್ಲೆ ಮಾಡಿದ್ದಾರೆ. ಬಸ್​ಗಾಗಿ ಕಾದು ನಿಂತಿದ್ದ ವಿದ್ಯಾರ್ಥಿನಿಯರ ಫೋಟೋ ಕ್ಲಿಕ್ಕಿಸಿ, ಬಳಿಕ ಅವರ ಬಳಿ ತೆರಳಿ ಮೊಬೈಲ್ ನಂಬರ್ ನೀಡುವಂತೆ ಪೀಡಿಸಿದ್ದಾರೆ. ನಂಬರ್ ಕೊಡಲು ನಿರಾಕರಿಸಿದ್ದಕ್ಕೆ ಸ್ವಾತಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಘಟನೆ ಸಂಬಂಧ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದೂಪರ ಸಂಘಟನೆ ಪ್ರತಿಭಟನೆ ನಡೆಸಿದೆ. ಸದ್ಯ ಚುಡಾಯಿಸಿದ ಯುವಕರನ್ನು ತೇರದಾಳ ಪೊಲೀಸರು ಬಂಧಿಸಿದ್ದಾರೆ


Spread the love

About Laxminews 24x7

Check Also

ಈಗ 41 ದೇಶಗಳಿಂದ ಇಂಧನ ಅಮದು, ಗಲ್ಫ್‌ನಲ್ಲಿರುವ ಪ್ರತಿಯೊಬ್ಬ ಭಾರತೀಯನ ಸುರಕ್ಷತೆ ನಮಗೆ ಮುಖ್ಯ: ಮೋದಿ

Spread the loveದೆಹಲಿ: ಈಗ ನಾವು 41 ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ