Breaking News

ಕುವೈತ್‍ನಿಂದ ಬೆಂಗಳೂರಿಗೆ ಬಂದಿಳಿದ 80 ಪ್ರಯಾಣಿಕರು………….

Spread the love

ಬೆಂಗಳೂರು, ಜೂ.3- ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕುವೈತ್ ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 25ನೇ ಏರ್ ಇಂಡಿಯಾ ವಿಮಾನದಲ್ಲಿ 80 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ನಿನ್ನೆ ಸಂಜೆ 5 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 80 ಮಂದಿ ಪ್ರಯಾಣಿಕರಲ್ಲಿ 64 ಪುರುಷರು ಮತ್ತು 16 ಮಹಿಳೆಯರು ಇದ್ದಾರೆ. ಈ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾರಲ್ಲೂ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ.

ಪ್ರಯಾಣಿಕರು 7 ದಿನಗಳು ಹಜ್ ಭವನದಲ್ಲಿ ಸಾಂಸ್ಥಿಕ ಸಂಪರ್ಕ ತಡೆಯನ್ನು ಪೂರ್ಣಗೊಳಿಸಿದ ಬಳಿಕ, ರೋಗ ಲಕ್ಷಣಗಳು ಕಂಡು ಬಂದಂತಹ ವ್ಯಕ್ತಿಗಳನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಕಳುಹಿಸಿಕೊಡಲಾಗುವುದು ಹಾಗೂ ರೋಗ ಲಕ್ಷಣ ರಹಿತ ವ್ಯಕ್ತಿಗಳು ಏಳು ದಿನಗಳ ಹೋಂ ಕ್ವಾರಂಟೈನ್‍ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.ಪ್ರಯಾಣಿಕರು 7 ದಿನಗಳು ಹಜ್ ಭವನದಲ್ಲಿ ಸಾಂಸ್ಥಿಕ ಸಂಪರ್ಕ ತಡೆಯನ್ನು ಪೂರ್ಣಗೊಳಿಸಿದ ಬಳಿಕ, ರೋಗ ಲಕ್ಷಣಗಳು ಕಂಡು ಬಂದಂತಹ ವ್ಯಕ್ತಿಗಳನ್ನು ಬೆಂಗಳೂರಿನ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಕಳುಹಿಸಿಕೊಡಲಾಗುವುದು ಹಾಗೂ ರೋಗ ಲಕ್ಷಣ ರಹಿತ ವ್ಯಕ್ತಿಗಳು ಏಳು ದಿನಗಳ ಹೋಂ ಕ್ವಾರಂಟೈನ್‍ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

https://youtu.be/OYEMtBeW6b0

 


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ