Breaking News

ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ

Spread the love

ನವದೆಹಲಿ, (ಮಾರ್ಚ್ 08): ಮುಂಬರುವ ಲೋಕಸಭಾ ಚುನಾವಣೆಗೆ (Loksabha Elections 2024)  ಕಾಂಗ್ರೆಸ್ (Congress) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಣಿ ಸಭೆಗಳ ನಂತರ ಅಂತಿಮವಾಗಿ ಇಂದು (ಮಾರ್ಚ್ 08) ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್‌, ಅಜಯ್ ಮಕೇನ್‌, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್​  ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಇನ್ನು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಿದೆ.  ವಿಜಯಪುರ, ಶಿವಮೊಗ್ಗ, ಹಾಸನ, ತುಮಕೂರು, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ, ಹಾವೇರಿ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.

ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ

  • ಶಿವಮೊಗ್ಗ- ಗೀತಾ ಶಿವರಾಜ್​ ಕುಮಾರ್
  • ತುಮಕೂರು- ಎಸ್​ಪಿ ಮುದ್ದಹನುಮೇಗೌಡ
  • ಮಂಡ್ಯ- ವೆಂಕಟರಾಮೇಗೌಡ (ಸ್ಟಾರ್ ಚಂದ್ರು)
  • ಹಾಸನ- ಶ್ರೇಯಸ್ ಪಟೇಲ್
  • ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್
  • ವಿಜಯಪುರ- ಎಚ್​ಆರ್​ ಅಲ್ಗೂರ್​
  • ಹಾವೇರಿ: ಆನಂದ್ ಸ್ವಾಮಿ ಗಡ್ಡ ದೇವರಮಠ

Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ