Breaking News

ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಓರ್ವಳ ಶವ

Spread the love

ಕಲಬುರಗಿ: ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ.

ಚಿತ್ತಾಪುರ ತಾಲೂಕಿನ ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಘಟನೆ ಸಂಬಂಧ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುವುದು ತನಿಖೆ ನಂತರ ತಿಳಿದು ಬರಲಿದೆ


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ