Breaking News

ಅನಂತಕುಮಾರ ಹೆಗಡೆಯನ್ನು ಬಿಜೆಪಿಯಿಂದ ಉಚ್ಚಾಟಿಸಲಿ: ಮಂಕಾಳ ವೈದ್ಯ

Spread the love

ಕಾರವಾರ: ಸಂವಿಧಾನ ತಿದ್ದುಪಡಿ ಮಾಡುವ ಮಾತುಗಳನ್ನಾಡಿರುವ ಸಂಸದ ಅನಂತಕುಮಾರ ಹೆಗಡೆ ಅವರನ್ನು ಬಿಜೆಪಿ ತಕ್ಷಣ ಉಚ್ಚಾಟಿಸಲಿ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಹೇಳಿದರು.

‘ಅನಂತಕುಮಾರ ಅವರನ್ನು ಪಕ್ಷದಿಂದ ಉಚ್ಛಾಟಿಸದಿದ್ದರೆ ಬಿಜೆಪಿಯು ಸಂವಿಧಾನ ಬದಲಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂಬುದು ಸ್ಪಷ್ಟವಾದಂತೆ’ ಎಂದು ಇಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡುತ್ತ ಹೇಳಿದರು.

ದೇಶದಲ್ಲಿ ಸಂವಿಧಾನ ಬದಲಿಸಿ, ಬ್ರಿಟಿಷ್ ಮಾದರಿಯ ಆಡಳಿತ ವ್ಯವಸ್ಥೆ ತರುವ ಉದ್ದೇಶ ಬಿಜೆಪಿಗೆ ಇದ್ದಂತಿದೆ. ದೇಶವನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳಿಗೆ ಮಾರುವ ಉದ್ದೇಶವೂ ಅವರಿಗೆ (ಬಿಜೆಪಿ) ಇದ್ದಿರಬಹುದು ಎಂಬುದು ಸಂಸದರ ಹೇಳಿಕೆಯಿಂದ ಅರ್ಥವಾಗುತ್ತಿದೆ’ ಎಂದು ಟೀಕಿಸಿದರು.

‘ಸಂಸದ ಅನಂತಕುಮಾರ ಹೆಗಡೆಯಾಗಲಿ, ನಾವಾಗಲಿ ಜನಪ್ರತಿನಿಧಿಗಳಾಗಿದ್ದು ಸಂವಿಧಾನದಿಂದ. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದವರು ಸಂವಿಧಾನವನ್ನೇ ಬದಲಿಸುವ ಮಾತುಗಳನ್ನಾಡುವುದು ಸರಿಯಲ್ಲ’ ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ