Breaking News

ತೋಟದ ಮನೆಯಲ್ಲಿ 25 ಮನುಷ್ಯರ ತಲೆಬುರುಡೆ ಪತ್ತೆ; ಮಾಟ-ಮಂತ್ರ ಶಂಕೆ, ಓರ್ವ ಅರೆಸ್ಟ್

Spread the love

ರಾಮನಗರ, ಮಾರ್ಚ್​.11: ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು (Human Skulls) ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಗಂಬೀರ ಆರೋಪ ಕೇಳಿ ಬಂದಿದೆ.

ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು ಸದ್ಯ ಸ್ಥಳಕ್ಕೆ ಬಂದ ಪೊಲೀಸರು (Bidadi Police) ಬಲರಾಮ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ನಿನ್ನೆಯಷ್ಟೇ ಮಹಾ ಶಿವರಾತ್ರಿಯ ಅಮಾವಸ್ಯೆ ಮುಗಿದಿದೆ.

ರಾಮನಗರದ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಬಲರಾಮ್ ಎಂಬ ವ್ಯಕ್ತಿ ರಾತ್ರಿ ವೇಳೆ ಸ್ಮಶಾನದಲ್ಲಿ ಪೂಜೆ ಮಾಡಿದ್ದು ಇದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ಸ್ಮಶಾನಕ್ಕೆ ಬಂದ ಬಿಡದಿ ಪೊಲೀಸರು ವಿಚಾರಣೆ ನಡೆಸಿ ಬಲರಾಮ್​ನನ್ನು ವಶಕ್ಕೆ ಪಡೆದಿದ್ದಾರೆ. ಬಲರಾಮ್ ತೋಟದ ಮನೆಯಲ್ಲಿ ಅನೇಕ ಮಾನವರ ತಲೆ ಬುರಡೆಗಳು ಪತ್ತೆಯಾಗಿವೆ. ನನ್ನ ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಾ ಬಂದಿದ್ದೇವೆ ಎಂದು ಬಲರಾಮ್ ತಿಳಿಸಿದ್ದು ವಿಚಾರಣೆ ಮುಂದುವರೆದಿದೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ